ಸಾಗರ: ಸಮನ್ವಯ ಶಿಕ್ಷಣ ಮಧ್ಯವರ್ತನೆ ಅಡಿಯಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರವನ್ನು ಹೊಸನಗರ ತಾಲ್ಲೂಕಿನ ಮೇಲಿನ ಬೆಸುಗೆಯ ಪಿ.ಎಂ.ಶ್ರೀ ಶಾಲೆಯಲ್ಲಿ ನ. 11ರಂದು ಆಯೋಜಿಸಲಾಗಿದೆ.

ಸಾಗರ ತಾಲ್ಲೂಕಿನಲ್ಲಿ 1ರಿಂದ 12ನೇ ತರಗತಿವರೆಗೆ ಸರ್ಕಾರಿ, ಅನುದಾನಿತ ಶಿಕ್ಷಣ ಶಾಲೆಗಳಲ್ಲಿ ಓದುತ್ತಿದ್ದು, ಲೋಕೋಮೋಟಾರ್ ಡಿಸೆಬಿಲಿಟಿ, ಪೂರ್ಣ ದೃಷ್ಟಿ ದೋಷ, ಶ್ರವಣ ದೋಷ, ಸೆರೆಬ್ರಲ್ ಪಾಲ್ಸಿ, ಬೌದ್ಧಿಕ ಅಸಮರ್ಥತೆ, ಬಹು ಅಂಗಾಂಗ ದೋಷ, ಶ್ರವಣ ಅಂಧತ್ವ ಸೇರಿ ನ್ಯೂನ್ಯತೆ ಹೊಂದಿರುವ ಮಕ್ಕಳು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಬಿರದಲ್ಲಿ ಭಾಗವಹಿಸುವ ಮಕ್ಕಳು ಶೇ 40ರಷ್ಟು ನ್ಯೂನ್ಯತೆ ಹೊಂದಿರುವ ಅಂಗವಿಕಲತೆ ಪ್ರಮಾಣ ಪತ್ರ, ಯುಡಿಐಡಿ ಕಾರ್ಡ್, ವಿದ್ಯಾರ್ಥಿಯ, ಪೋಷಕರ ಆಧಾರ್ ಕಾರ್ಡ್, ವಿದ್ಯಾರ್ಥಿನಿಯ ಎರಡು ಭಾವಚಿತ್ರ, ಆದಾಯ ಪ್ರಮಾಣ ಪತ್ರ, ಬಿಪಿಎಲ್ ಕಾರ್ಡ್, ಮಗುವಿನ ಬ್ಯಾಂಕ್ ಪಾಸ್ ಪುಸ್ತಕವನ್ನು ಕಡ್ಡಾಯವಾಗಿ ತರಬೇಕು ಎಂದು ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.