ಸಾಗರ: ಸರ್ಕಾರಿ ಆಸ್ಪತ್ರೆಯಲ್ಲಿನ ಒಳ ರೋಗಿಗಳಿಗೆ ವರ್ಷದ 365 ದಿನಗಳ ಕಾಲವೂ ಪೂರೈಕೆಯಾಗುವ ಆಹಾರ ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿನ ಒಳ ರೋಗಿಗಳಿಗೆ ನೀಡುವ ಊಟದ ವ್ಯವಸ್ಥೆಯನ್ನು ಶನಿವಾರ ಪರಿಶೀಲಿಸಿ, ಊಟದ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಸ್ಪತ್ರೆಯಲ್ಲಿ ಪೂರೈಕೆಯಾಗುವ ಆಹಾರದ ಗುಣಮಟ್ಟ ಉತ್ಕೃಷ್ಟವಾಗಿದ್ದರೆ ಮಾತ್ರ ಆಸ್ಪತ್ರೆಯ ಆಡಳಿತಕ್ಕೆ ಒಳ್ಳೆಯ ಹೆಸರು ಬರುತ್ತದೆ. ರೋಗಿಗಳು ಶೀಘ್ರವಾಗಿ ಗುಣಮುಖರಾಗಲು ಅಲ್ಲಿ ಪೂರೈಕೆಯಾಗುವ ಆಹಾರವೂ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯ ಸಿಬ್ಬಂದಿಯಿಂದ ಉತ್ತಮ ಸೇವೆ ದೊರಕುತ್ತಿದೆ. ಕೆಲವೊಂದು ನ್ಯೂನತೆಗಳ ಬಗ್ಗೆ ದೂರುಗಳಿದ್ದರೂ ಒಟ್ಟಾರೆಯಾಗಿ ಪರಿಸ್ಥಿತಿ ಉತ್ತಮವಾಗಿರುವುದರಿಂದಲೇ ಪಕ್ಕದ ತಾಲ್ಲೂಕುಗಳಿಂದ ರೋಗಿಗಳು ಇಲ್ಲಿನ ಆಸ್ಪತ್ರೆಗೆ ಬರುತ್ತಿದ್ದಾರೆ. ಆಹಾರ ಪೂರೈಸುವ ಗುತ್ತಿಗೆದಾರರು ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಮುಂಬರುವ ಸರ್ಕಾರದ ಬಜೆಟ್ನಲ್ಲಿ ಆಸ್ಪತ್ರೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮಂಜೂರಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ನಗರಸಭೆ ಸದಸ್ಯರಾದ ಮಧುಮಾಲತಿ, ಗಣಪತಿ ಮಂಡಗಳಲೆ, ಲಲಿತಮ್ಮ, ಪ್ರಮುಖರಾದ ಐ.ಎನ್. ಸುರೇಶ್ ಬಾಬು, ಸೋಮಶೇಖರ್ ಲ್ಯಾವಿಗೆರೆ, ಜಯರಾಮ್, ನಾರಾಯಣ ಅರಮನೆಕೇರಿ, ಎಲ್. ಚಂದ್ರಪ್ಪ, ತಾರಾಮೂರ್ತಿ, ರಮೇಶ್ ಚಂದ್ರಗುತ್ತಿ, ದಿನೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.