ಶಿವಮೊಗ್ಗ: ವಿಐಎಸ್‌ಎಲ್ ಕಾರ್ಖಾನೆ ಉಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಶಾಸಕ ಬಿ.ಕೆ.ಸಂಗಮೇಶ ನೇತೃತ್ವದಲ್ಲಿ ಸಾವಿರಾರು ಮಂದಿ ಭದ್ರಾವತಿಯಿಂದ ಸೋಗಾನೆಯ ವಿಮಾನ ನಿಲ್ದಾಣದತ್ತ ಸೋಮವಾರ ಮುಂಜಾನೆ ಪಾದಯಾತ್ರೆ ಹೊರಟಿದ್ದಾರೆ.

ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ನಮ್ಮ ಅಹವಾಲು ಹೇಳಿಕೊಳ್ಳುತ್ತೇವೆ. ಕಾರ್ಖಾನೆಯ ಭವಿಷ್ಯ ಅವರ ಕೈಯಲ್ಲಿದೆ ಎಂದು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರು ಈ ಹಿಂದೆ ಹೇಳಿದ್ದರು.

ಹೀಗಾಗಿ 15ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕ ಮುಖಂಡರನ್ನು ನಸುಕಿನಲ್ಲಿ ಭದ್ರಾವತಿಯ ಅವರ ಮನೆಗಳಿಗೆ ತೆರಳಿ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಭದ್ರಾವತಿಯಲ್ಲಿ ಕೆಲವು ಕಾಂಗ್ರೆಸ್ ಮುಖಂಡರ ಮನೆಗಳ ಮುಂದೆ ಪೊಲೀಸ್ ನಿಗಾ ಇಡಲಾಗಿದೆ.

ಗುತ್ತಿಗೆ ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಸುದ್ದಿ ತಿಳಿದು ಶಾಸಕ ಸಂಗಮೇಶ್ವರ ನೇತೃತ್ವದಲ್ಲಿ ಕಾರ್ಮಿಕರು ಹಾಗೂ ಸ್ಥಳೀಯರು ಪಾದಯಾತ್ರೆ ಹೊರಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.