ಶಿವಮೊಗ್ಗ: ಹಿರಿಯ ಗಮಕ ಕಲಾವಿದ, ಪದ್ಮಶ್ರೀ ಪುರಸ್ಕೃತ ಎಚ್.ಆರ್.ಕೇಶವಮೂರ್ತಿ (88) ಬುಧವಾರ ಸಂಜೆ ಇಲ್ಲಿನ ಹೊಸಹಳ್ಳಿಯ ನಿಧನರಾದರು.ಅವರಿಗೆ ಪತ್ನಿ, ಪುತ್ರಿ ಇದ್ದಾರೆ.

ರಾಜ್ಯದ ಮೂಲೆ ಮೂಲೆಗೂ ಗಮಕ ಕಲೆಯ ಘಮವನ್ನು ಬೀರಿದ ಎಚ್.ಆರ್.ಕೇಶವಮೂರ್ತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾದರು.

1934ರ ಫೆ.22 ರಂದು ಹೊಸಹಳ್ಳಿ ರಾಮಸ್ವಾಮಿ ಶಾಸ್ತ್ರಿ ಮತ್ತು ಲಕ್ಷ್ಮೀದೇವಮ್ಮ ದಂಪತಿಯ ಪುತ್ರನಾಗಿ ಜನಿಸಿದ ಅವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. ತಂದೆ-ತಾಯಿ ರಾಗವಾಗಿ ಹಾಡುತ್ತಿದ್ದ ಪುರಾಣದ ಕಥನಗಳಿಂದ ಉತ್ತೇಜಿತರಾಗಿ, 16 ನೇ ವಯಸ್ಸಿನಿಂದ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಡುವುದನ್ನು ರೂಢಿಸಿಕೊಂಡಿದ್ದರು. 100 ಕ್ಕೂ ಹೆಚ್ಚು ಶೈಲಿಯಲ್ಲಿ ವಾಚನ ಮಾಡುವ ಮೂಲಕ ‘ಶತರಾಗಿ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಶಾಂತಲನಾಟ್ಯಶ್ರೀ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತರಾದ ಅವರಿಗೆ 2022 ರಲ್ಲಿ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು.

ಎಚ್.ಆರ್.ಕೇಶವಮೂರ್ತಿ ಅವರ ನಿಧನಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಆರ್ ಎಸ್ ಎಸ್ ಸರ್ವಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಕ್ಷೇತ್ರೀಯ ಸಂಘ ಚಾಲಕ ವಿ.ನಾಗರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.