ಶಿವಮೊಗ್ಗ: ಲಾಕ್ಡೌನ್ನಿಂದಸಮಸ್ಯೆಗೆ ಸಿಲುಕಿರುವ ಜಿಲ್ಲೆಯ ಅನಾನಸ್ ಬೆಳೆಗಾರರ ಹಿತ ಕಾಪಾಡಲು ಮುಂದಾಗಿರುವ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಗುರುವಾರ ಮೈಸೂರಿನ ಸಿಎಫ್ಟಿಆರ್ಐ (ಸೆಂಟ್ರಲ್ ಫುಡ್ ಟೆಕ್ನಾಲಜಿ ರೀಸರ್ಚ್ ಇನ್ಸ್ಟಿಟ್ಯೂಟ್) ಅಧಿಕಾರಿಗಳೊಂದಿಗೆವೀಡಿಯೊಸಂವಾದ ನಡೆಸಿದರು.

ಜಿಲ್ಲೆಯಲ್ಲಿ ಅಂದಾಜು 65 ಸಾವಿರ ಟನ್ ಅನಾನಸು ಬೆಳೆಯಲಾಗಿದೆ. 20 ದಿನಗಳಲ್ಲಿ ವಿವಿಧ ಮೂಲಗಳನ್ನು ಬಳಸಿಕೊಂಡು ಅನಾನಸು ಮಾರುಕಟ್ಟೆಗೆ ವಿಲೇವಾರಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಬೆಳೆಯಲಾಗುವ ರಾಜಾ ತಳಿಯ ಅನಾನಸಿಗೆ ದೆಹಲಿಯ ಜ್ಯೂಸ್ ಕಂಪೆನಿಗಳು ಪ್ರಮುಖ ಮಾರುಕಟ್ಟೆ. ಲಾಕ್ಡೌನ್ನಿಂದ ಸಾಗಣೆಗೆ ತೊಂದರೆಯಾಗಿದೆ. ಪ್ರಸ್ತುತ ದಿನನಿತ್ಯ 125ರಿಂದ 150 ಟನ್ ಮಾತ್ರ ಸರಬರಾಜು ಮಾಡಲು ಸಾಧ್ಯವಾಗುತ್ತಿದೆ. ಪ್ರತಿನಿತ್ಯ 250ರಿಂದ 300ಟನ್ ಇಳುವರಿ ಬರುತ್ತಿದೆ ಎಂದು ವಿವರ ನೀಡಿದರು.

ಸ್ಥಳೀಯವಾಗಿ ಸ್ವಸಹಾಯ ಸಂಘಗಳನ್ನು ಬಳಸಿಕೊಂಡು ಮಾರುಕಟ್ಟೆ ಕಲ್ಪಿಸಲು, ವಿವಿಧ ಆಹಾರ ಸಂಸ್ಕರಣಾ ತಂತ್ರಗಳನ್ನು ಬಳಸಿಕೊಂಡು ಅನಾನಸು ಉತ್ಪನ್ನಗಳನ್ನು ದಾಸ್ತಾನು ಇರಿಸುವುದು ಸೇರಿದಂತೆ ಬೆಳೆಗಾರರಿಗೆ ಹೊಸ ಮಾರುಕಟ್ಟೆ ಅವಕಾಶಗಳ ಬಗ್ಗೆ ತಜ್ಞರಿಂದ ಮಾರ್ಗದರ್ಶನ ಬಯಸಲಾಗಿದೆ ಎಂದು ಹೇಳಿದರು.

ಕೋಲ್ಡ್ ಸ್ಟೋರೇಜ್ ಬಳಸಿಕೊಂಡು ಅನಾನಸು ಗರಿಷ್ಠ ಒಂದು ವಾರ ದಾಸ್ತಾನು ಇರಿಸಲು ಸಾಧ್ಯವಿದೆ. ಪಲ್ಪ್ ಆಗಿ ಪರಿವರ್ತಿಸಿದರೆ ಗರಿಷ್ಠ ಎರಡು ವರ್ಷ ಸಂಗ್ರಹಿಸಿಇಡಬಹುದು.ಹುಬ್ಬಳ್ಳಿ ಮತ್ತು ಚಿತ್ತೂರುಗಳಲ್ಲಿ ಅಂತಹ ಸಂಸ್ಕರಣಾ ಉದ್ಯಮಗಳಿವೆ.ಅನಾನಸನ್ನು ಪಲ್ಪ್ ಆಗಿ ಪರಿವರ್ತಿಸಿದ ಬಳಿಕ ಹಾಪ್ಕಾಮ್ಸ್ ಮೂಲಕ ಮಾರುಕಟ್ಟೆ ವ್ಯವಸ್ಥೆ ಮಾಡಬಹುದಾಗಿದೆ ಎಂದು ಸಿಎಫ್ಟಿಆರ್ಐ ಅಧಿಕಾರಿಗಳು ಸಲಹೆ ನೀಡಿದರು.

ಅತ್ಯಂತ ಕಡಿಮೆ ತಂತ್ರಜ್ಞಾನ ಬಳಸಿಕೊಂಡು ಕಡಿಮೆ ವೆಚ್ಚದಲ್ಲಿ ಅನಾನಸು ಸಂಸ್ಕರಣೆ ಮಾಡಲು ಸಾಧ್ಯವಿದೆ. ಸ್ವಸಹಾಯ ಗುಂಪುಗಳ ಸಹಯೋಗದಲ್ಲಿ ಅಂತಹ ಚಟುವಟಿಕೆ ನಡೆಸಲು, ರೈತರಿಗೆ, ಸ್ವಸಹಾಯ ಸಂಘಗಳ ಸದಸ್ಯರಿಗೆ ಸೂಕ್ತ ತರಬೇತಿ ನೀಡಲು ಸಂಸ್ಥೆ ಸಿದ್ಧವಿದೆ. ಲಾಕ್ಡೌನ್ ಮುಗಿದ ಬಳಿಕ ಕ್ರಮ ಕೈಗೊಳ್ಳಬಹುದು.ಇದರಿಂದ ಮುಂದಿನ ದಿನಗಳಲ್ಲಿ ಸ್ಥಳೀಯವಾಗಿ ಮಾರುಕಟ್ಟೆ ವಿಸ್ತರಿಸಲು ಸಾಧ್ಯವಿದೆ. ಸಂಸ್ಥೆ ತಾಂತ್ರಿಕ ನೆರವು ನೀಡುತ್ತದೆಎಂದು ಸಂಸ್ಥೆಯ ನಿರ್ದೇಶಕ ಡಾ.ರಾಘವರಾವ್ಭರವಸೆ ನೀಡಿದರು.

ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಯೋಗೀಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.