ಸೊರಬ: ‘ಗ್ರಾಮ ಪಂಚಾಯಿತಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದು, ನನ್ನ ಸೋಲು–ಗೆಲುವಿನಲ್ಲಿ ಭಾಗಿಯಾಗಿರುವ ಕಾರ್ಯಕರ್ತರನ್ನು ಚುನಾವಣೆಯಲ್ಲಿ ಗೆಲ್ಲಿಸುವುದೇ ನನ್ನ ಗುರಿ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.

ತಾಲ್ಲೂಕಿನ ಶಕುನವಳ್ಳಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.

‘ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬೆಂಬಲಿಗರಿಗೆ ಹಾಗೂ ಕಾರ್ಯಕರ್ತರಿಗೆ ಸ್ಥಾನಮಾನ ಕಲ್ಪಿಸುವುದು ನಾಯಕರ ಲಕ್ಷಣ. ಈ ಹಿಂದೆಯೂ ತಾಲ್ಲೂಕಿನ 41 ಗ್ರಾಮ ಪಂಚಾಯಿತಿಗಳಲ್ಲಿ ಬಹುಪಾಲು ಗ್ರಾಮ ಪಂಚಾಯಿತಿ ಅಧಿಕಾರವನ್ನು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಮುಂಬರುವ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರೇ ಗೆಲ್ಲುವಂತೆ ನೋಡಿಕೊಳ್ಳಲಾಗುವುದು’ ಎಂದರು.

ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಮುಖಂಡರ ಜೊತೆ ಚರ್ಚಿಸಿ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಶಿವಲಿಂಗಗೌಡ, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸದಾನಂದಗೌಡ, ಜೆಡಿಎಸ್ ವಕ್ತಾರ ಎಂ.ಡಿ. ಶೇಖರ್, ಎಪಿಎಂಸಿ ಅಧ್ಯಕ್ಷ ಜೈಶೀಲಪ್ಪ, ಈರಪ್ಪ, ಮೋಹನಗೌಡ, ಬಸವಂತಪ್ಪ ಕೋಟೆ, ಕೃಷ್ಣಮೂರ್ತಿ ನಾಡಿಗ್, ರಾಮಚಂದ್ರ, ಮಂಜುನಾಥ್ ಮೇಷ್ಟ್ರುಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.