ಶಿವಮೊಗ್ಗ: ಅಖಿಲ ಭಾರತ ವೀರಶೈವ ಮಹಾಸಭಾ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ರುದ್ರಮುನಿ ಸಜ್ಜನ್ ಪುನರಾಯ್ಕೆಯಾಗಿದ್ದಾರೆ.

ಮಹಾಸಭಾ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ರುದ್ರಮೂರ್ತಿ ಸಜ್ಜನ್ 1,300 ಮತಗಳನ್ನು ಪಡೆಯುವ ಮೂಲಕ 327 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಎದುರಾಳಿಯಾಗಿದ್ದ ಅಶ್ಬಿನ್ ಮತ್ತು ನಂಜಪ್ಪ ಅವರು ಸೋಲು ಅನುಭವಿಸಿದ್ದಾರೆ.

ಸತತವಾಗಿ 14 ವರ್ಷಗಳಿಂದಲೂ ಅಧ್ಯಕ್ಷರಾಗಿ ಇರುವ ರುದ್ರಮುನಿ ಅವರು ಇದೀಗ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ರುದ್ರಮುನಿ ಗೆಲುವು ಸಾಧಿಸುತ್ತಿದ್ದಂತೆಯೇ ಅವರ ಬೆಂಬಲಿಗರು ಮತ್ತು ಮಹಾಸಭಾದ ಹಲವರು ವಿಜಯೋತ್ಸವ ಆಚರಿಸಿದರು.

ಮಹಾಸಭಾದ ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಸ್ವಾಮಿ ಆಯ್ಕೆಯಾಗಿದ್ದಾರೆ. ಸೊರಬ ತಾಲ್ಲೂಕು ಘಟಕ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗುರುಕುಮಾರ ಪಾಟೀಲ್ ಕೇವಲ 2 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.