ಸಾಗರ: ‘ಹಾಸ್ಟೆಲ್ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಸಬೇಕು. ಈ ವಿಷಯದಲ್ಲಿ ಯಾವುದೇ ದೂರು ಬಂದರೆ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಸಿದ್ದಾರೆ.

ಇಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ಗೆ ಸೋಮವಾರ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ‘ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಹಾಸ್ಟೆಲ್ಗಳಲ್ಲಿ ಮೂಲ ಸೌಕರ್ಯದ ವ್ಯವಸ್ಥೆ ಇರುವಂತೆ ಸಿಬ್ಬಂದಿ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಅಡುಗೆಯ ಜೊತೆಗೆ ಸ್ವಚ್ಛತೆಯ ವಿಷಯದಲ್ಲೂ ಹಾಸ್ಟೆಲ್ ಸಿಬ್ಬಂದಿ ಹೆಚ್ಚಿನ ಮುತುವರ್ಜಿ ತೋರಬೇಕು. ಹಾಸ್ಟೆಲ್ನ ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಅಲ್ಲಿನ ವಿದ್ಯಾರ್ಥಿಗಳು ಓದಿನಲ್ಲಿ ಏಕಾಗ್ರತೆ ತೋರಲು ಸಾಧ್ಯ. ಹಾಸ್ಟೆಲ್ನ ವಿದ್ಯಾರ್ಥಿಗಳ ಸುರಕ್ಷತೆಯತ್ತ ಕೂಡ ನಿಗಾ ಇಡಬೇಕು’ ಎಂದು ತಿಳಿಸಿದರು.

ನಗರಸಭೆ ಸದಸ್ಯರಾದ ಸೈಯದ್ ಜಾಕೀರ್, ಗಣಪತಿ ಮಂಡಗಳಲೆ, ಪ್ರಮುಖರಾದ ಕಲಸೆ ಚಂದ್ರಪ್ಪ, ಸೋಮಶೇಖರ ಲ್ಯಾವಿಗೆರೆ, ಗಿರೀಶ್ ಕೋವಿ, ನಾರಾಯಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.