ಶಿಕಾರಿಪುರ: ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಆಧಾರದ ಮೇಲೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ.

ತಾಲ್ಲೂಕಿನ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ(ಸೊಪ್ಪಿನಕೇರಿ)ಶಾಲೆ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ.

ಶಿಕ್ಷಕ ಶಾಂತಕುಮಾರ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆಪಾದನೆ ಆಧಾರದ ಮೇಲೆ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಲೈಂಗಿಕ ಕಿರುಕುಳದ ಬಗ್ಗೆ ಕೇಳಿ ಬಂದ ಆರೋಪಗಳ ಅಧಾರದ ಮೇಲೆ ಪ್ರಕರಣದ ಬಗ್ಗೆ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಡಿಡಿಪಿಐ ಅವರಿಗೆ ವರದಿ ನೀಡಲಾಗಿತ್ತು. ವರದಿ ಆಧಾರದ ಮೇಲೆ ಡಿಡಿಪಿಐ ಶಿಕ್ಷಕರ ಅಮಾನತಿಗೆ ಆದೇಶಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್ 'ಪ್ರಜಾವಾಣಿ'ಗೆ ತಿಳಿಸಿದರು.
.ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅಮಾನತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.