ಶಿವಮೊಗ್ಗ: ‘ಮಂತ್ರಾಲಯಕ್ಕೆ ಹೋಗಲು ಸಾಧ್ಯವಾಗದ ಬಹಳಷ್ಟು ಜನರಿಗೆ ಇಷ್ಟಾರ್ಥ ಈಡೇರಿಸಿಕೊಳ್ಳಲು ಶಿವಮೊಗ್ಗದ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಶಾಖಾ ಮಠ ನೆರವಾಗಲಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಲ್ಲಿನ ಶ್ರೀಗಂಧ ಸಂಸ್ಥೆ ಮತ್ತು ರಾಘವೇಂದ್ರ ಸ್ವಾಮಿಗಳ ಭಕ್ತರ ನೇತೃತ್ವದಲ್ಲಿ ಬೊಮ್ಮನಕಟ್ಟೆಯ ದೇವಂಗಿ ಬಡಾವಣೆಯಲ್ಲಿ ನಿರ್ಮಿಸಿರುವ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಶಾಖಾ ಮಠದ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಡಿದರು.

ಮಂತ್ರಾಲಯದ ಹಿರಿಯ ಸ್ವಾಮೀಜಿ ಅವರ ಆಶಯ, ಕಿರಿಯ ಸ್ವಾಮೀಜಿ ಸೂಚನೆಯಂತೆ ಮಠ ನಿರ್ಮಾಣಕ್ಕೆ ನಿವೇಶನದ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀಗಂಧ ಸಂಸ್ಥೆಯ ಅಧ್ಯಕ್ಷರೂ ಆದ ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಂತ್ರಾಲಯ ಮಠದ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಶಾಸಕ ಕೆ.ಎಸ್. ಈಶ್ವರಪ್ಪ ಹಾಗೂ ಪುತ್ರ ಕೆ.ಇ. ಕಾಂತೇಶ್ ನೇತೃತ್ವದಲ್ಲಿ ವಿನೋಬನಗರದ ಡಿವಿಎಸ್ ಶಾಲಾ ಆವರಣದಿಂದ ಅಲಂಕೃತ ರಥದಲ್ಲಿ ಕರೆದೊಯ್ಯಲಾಯಿತು.

ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಹಾನಗರ ಪಾಲಿಕೆ ಸದಸ್ಯ ಇ. ವಿಶ್ವಾಸ್, ನಗರಸಭೆ ಸುಭಾಷ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರಭದ್ರಪ್ಪ ಪೂಜಾರ್, ಉದ್ಯಮಿ ಅಶ್ವತ್ಥ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.