ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಭದ್ರಾವತಿ ಸಮೀಪದ ಕಾಚಗೊಂಡನಹಳ್ಳಿಯ ಡಿ.ಆನಂದ್, ಉಪಾಧ್ಯಕ್ಷರಾಗಿ ಚನ್ನಗಿರಿ ತಾಲ್ಲೂಕು ಕಂಚುಗಾರನಹಳ್ಳಿಯ ಬಸಪ್ಪ ಅವಿರೋಧವಾಗಿ ಆಯ್ಕೆಯಾದರು.

ದಾವಣಗೆರೆ, ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿ ಒಳಗೊಂಡ ಶಿಮುಲ್ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಆನಂದ್, ಉಪಾಧ್ಯಕ್ಷ ಸ್ಥಾನಕ್ಕೆ ಬಸಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಇಬ್ಬರೂ ಅವಿರೋಧ ಆಯ್ಕೆಯಾದರು.ಚುನಾವಣಾಧಿಕಾರಿಯಾಗಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಷಡಾಕ್ಷರಿ ಕಾರ್ಯನಿರ್ವಹಿಸಿದರು.

ಏ.29ರಂದು ಶಿಮುಲ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು.14 ಸ್ಥಾನಗಳ ನಿರ್ದೇಶಕರ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಒಟ್ಟು 31 ಮಂದಿ ಸ್ಪರ್ಧಿಸಿದ್ದರು. ಅವರಲ್ಲಿ ಜೆಡಿಎಸ್–ಕಾಂಗ್ರೆಸ್ ಬೆಂಬಲಿತ 11 ಮಂದಿ ಹಾಗೂ ಬಿಜೆಪಿ ಬೆಂಬಲಿತ 3 ಮಂದಿ ಆಯ್ಕೆಯಾಗಿದ್ದರು.ಸಹಕಾರಿ ನಿಯಮಗಳ ಪ್ರಕಾರ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದ 15 ದಿನಗಳ ಒಳಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ಅದಕ್ಕಾಗಿ ಮೇ 10ರಂದು ಆಯ್ಕೆ ನಡೆಸಲು ನಿರ್ಧರಿಸಲಾಗಿತ್ತು.

ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿತರಿಗೆ ಸ್ಥಾನ ದೊರೆತ ಕಾರಣ ಎರಡೂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಹಿಹಂಚಿ ಸಂಭ್ರಮಿಸಿದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ಮಂಜುನಾಥ ಗೌಡ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಶಾಸಕ ಅಪ್ಪಾಜಿಗೌಡ, ಹಾಲಿ ಅಧ್ಯಕ್ಷ ವಿದ್ಯಾಧರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.