ಶಿರಾಳಕೊಪ್ಪ: ಮಧು ಬಂಗಾರಪ್ಪ ಕಳೆದ ಬಾರಿ ಶಾಸಕರಾದಾಗ ಸಾವಿರಾರು ಜನರ ಜಮೀನಿಗೆ ಹಕ್ಕು ಪತ್ರ ನೀಡಿದ್ದರು. ತಾವು ಕೂಡ ತಂದೆ ಹಾಗೂ ಸಹೋದರನ ಹಾದಿಯಲ್ಲಿ ಮುಂದೆ ಸಾಗುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಶಿಕಾರಿಪುರ ತಾಲ್ಲೂಕಿನ ತೊಗರ್ಸಿ, ಹರಗಿ, ಚಿಕ್ಕ ಮಾಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಗರ್ಸಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು ಒಲವು ತೋರುತ್ತಿದ್ದಾರೆ. ಆದ್ದರಿಂದ, ಈ ಬಾರಿಯ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ’ ಎಂದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬದ ಮಹಿಳೆಯರು, ಅಶಕ್ತ ಕುಟುಂಬಗಳು ಸುಂದರ ಬದುಕು ಕಟ್ಟಿಕೊಂಡಿದ್ದಾರೆ. ಇಲ್ಲಿ ಗ್ಯಾರಂಟಿ ಭಾಗ್ಯಗಳು ಎಲ್ಲಾ ಧರ್ಮ, ಸಮುದಾಯಗಳ ಜನಮನ ಗೆದ್ದಿವೆ. ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಕನಸು ನನಸಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರನ್ನು ತಾಲ್ಲೂಕಿನ ಜನ ಪ್ರೀತಿಯಿಂದ ಕಾಣುತ್ತಿದ್ದರು. ಅವರ ಜನಪರ ಸೇವೆಯನ್ನು ಮುಂದುವರೆಸಿಕೊಂಡು ಹೋಗಲು ನನಗೂ ಅವಕಾಶ ಕಲ್ಪಿಸಿಕೊಡಿ ಎಂದು ಕೋರಿದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ‘ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ಈ ಭಾಗದಲ್ಲಿ ಯಾವುದೇ ನಾಯಕರನ್ನು ಬೆಳೆಯಲು ಬಿಡಲಿಲ್ಲ. ಕಳೆದ 40 ವರ್ಷಗಳಿಂದ ಈ ಭಾಗದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿಕೊಂಡು ಬರಲಾಗುತ್ತಿದೆ’ ಎಂದು ಆರೋಪಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಪಿ ನಾಗರಾಜಗೌಡ ಮಾತನಾಡಿ, ಬಗರ್ ಹುಕುಂ ಸಮಸ್ಯೆ ಸೇರಿದಂತೆ ಅನೇಕ ಬಗೆಹರಿಸಬಹುದಾದ ಸವಾಲುಗಳು ಇಲ್ಲಿವೆ. ಆದರೆ, ಸಂಸದ ಬಿ.ವೈ. ರಾಘವೇಂದ್ರ ಅವರು ಈ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಕಳೆದ 15 ವರ್ಷದಿಂದ ಇಲ್ಲಿ ಸಂಸದರಾಗಿ ಆಡಳಿತ ನಡೆಸುತ್ತಿದ್ದಾರೆ. ಆದರೆ, ರೈತಾಪಿ ವರ್ಗಕ್ಕೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ ಎಂದು ದೂರಿದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ್, ಕೆಪಿಸಿಸಿ ಸದಸ್ಯ ಗೋಣಿ ಮಹಲ್ತೇಶ್, ನಗರದ ಮಹದೇವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಂ, ಪುಷ್ಪ ಶಿವಕುಮಾರ್, ಧೀರರಾಜ ಹೊನ್ನವಿಲೆ, ಬಲ್ಕೀಷ್ ಭಾನು, ಭಂಡಾರಿ ಮಾಲತೇಶ್, ವೈ.ಎಚ್ ನಾಗರಾಜ್, ಪ್ರವೀಣ್, ಗ್ರಾಮ ಪಂಚಾಯಿತಿ ಸದಸ್ಯರಾದ ಕೌಲಿ ಉಮೇಶ್, ಹುಣಸಿಕಟ್ಟೆ ಚೇತನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.