ಸೊರಬ: ತಾಲ್ಲೂಕಿನ ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿಯಲ್ಲಿ ತಪ್ಪಾಗಿದೆ ಎಂಬುದಾಗಿ ವರದಿ ಸಲ್ಲಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಒ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಸಂಚಾಲಕ ಮಹೇಶ್ ಶಕುನವಳ್ಳಿ ಆಗ್ರಹಿಸಿದರು.

ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಎಣ್ಣೆಕೊಪ್ಪ, ಆಗಸನಹಳ್ಳಿ, ಚಿಟ್ಟೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಗುರುವಾರ ಹಮ್ಮಿಕೊಂಡಿದ್ದ ತಮಟೆ ಚಳವಳಿ ನೇತೃತ್ವ ವಹಿಸಿ ಮಾತನಾಡಿದರು.

ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಪಿತಸ್ಥರೆಂದು ಪರಿಶೀಲನಾ ಸಮಿತಿ ವರದಿಯಿಂದ ಗೊತ್ತಾಗಿದ್ದು, ಕೂಡಲೇ ಪಿಡಿಒ ಅವರನ್ನು ಅಮಾನತುಗೊಳಿಸಬೇಕು. ಚಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೆಕೊಪ್ಪ ಸರ್ವೆ ನಂ. 44ರಲ್ಲಿ ನಿವೇಶನ ಹಂಚಿಕೆ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದರೂ ಅಲ್ಲಿನ ಅಧಿಕಾರಿ ಯಾವುದೇ ಕ್ರಮ ಕೈಗೊಳ್ಳದೇ ಕಾಲಹರಣ ಮಾಡಿದ್ದಾರೆ. ಪರಿಣಾಮವಾಗಿ ಆ ಜಾಗವನ್ನು ಬೇರೆಯವರು ಅತಿಕ್ರಮಣ ಮಾಡಿದ್ದಾರೆ. ಆಗಸನಹಳ್ಳಿ ಗ್ರಾಮದಲ್ಲಿ ರಸ್ತೆ ಅತಿಕ್ರಮಣ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿತ್ತು. ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಹಿರೇಚೌಟಿ ಗ್ರಾಮದ ಮಧ್ಯಭಾಗದಲ್ಲಿ ಅನಧಿಕೃತವಾಗಿ ಅಡಿಕೆ ಸುಲಿಯುವ ಯಂತ್ರವನ್ನು ಅಳವಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ಯಂತ್ರವನ್ನು ವಶಪಡಿಸಿಕೊಳ್ಳಬೇಕು ಎಂದೂ ಅವರು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿಯ ರಾಜ್ಯ ವಿಭಾಗೀಯ ಸಂಚಾಲಕ ಗುರುರಾಜ, ಜಿಲ್ಲಾ ಸಂಚಾಲಕ ಬಂಗಾರಪ್ಪ ನಿಟ್ಟಕ್ಕಿ, ತಾಲ್ಲೂಕು ಸಂಘಟನಾ ಸಂಚಾಲಕ ಹರೀಶ್ ಚಿಟ್ಟೂರು, ನಾಗರಾಜ ಹುರಳಿಕೊಪ್ಪ, ಚಂದ್ರಪ್ಪ ತುಡನೀರು, ರೇವಪ್ಪ ಹಿರೇಚೌಟಿ, ಪರಮೇಶ್ವರ್, ಶಿವಮೂರ್ತಿ, ಪ್ರಭು, ರಾಜು ಆಗಸನಹಳ್ಳಿ ಇದ್ದರು.

ಗ್ರಾಮ ಪಂಚಾಯಿತಿ ನೌಕರರ ನೇಮಕಾತಿ ಹಕ್ಕು ಇಒ ಅವರಗಿಲ್ಲ. ಈ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಲಾಗಿದೆ. ಪರಿಶೀಲನೆ ಹಂತದಲ್ಲಿದೆ
ಪ್ರದೀಪಕುಮಾರ್ ಪ್ರಭಾರ ಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.