ಸೊರಬ: ಒಟ್ಟು ಜನಸಂಖ್ಯೆಯಲ್ಲಿ ಶೇ 60ರಷ್ಟು ಇರುವ ಹಿಂದುಳಿದ ಸಮುದಾಯವನ್ನು ಮುಖ್ಯವಾಹಿನಿಗೆ ತರುವಲ್ಲಿ ಬಿಜೆಪಿ ಯಶಸ್ವಿಯಾಗಿದೆ ಎಂದು ಪಕ್ಷದ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರ ಬಾಬು ತಿಳಿಸಿದರು.

ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೈಗಾರಿಕೀಕರಣ ಹಾಗೂ ಜಾಗತೀಕರಣದಿಂದಾಗಿ ಕುಲ ಕಸುಬುಗಳು ನಶಿಸುತ್ತಿದ್ದು, ಯಾವುದೇ ಕ್ಷೇತ್ರದಲ್ಲಿ ನೆಲೆ ಕಂಡುಕೊಳ್ಳಲಾಗದ ತಳ ಸಮುದಾಯಗಳಿಗೆ ಸಾಮೂಹಿಕವಾಗಿ ನೆಲೆ ಕಲ್ಪಿಸಲು ಸಂಸತ್ ಹಾಗೂ ವಿಧಾನಸಭೆಯಲ್ಲಿ ಹಿಂದುಳಿದ ವರ್ಗಗಳ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಹಿಂದುಳಿದ ವರ್ಗಗಳ ಪರವಾಗಿ ಕಾಂಗ್ರೆಸ್ ಇದೆ ಎಂದು ಹೇಳುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆಯೇ ಹೊರತು ಅಧಿಕಾರವಿದ್ದಾಗ ಏನೂ ಮಾಡಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ₹ 2,445 ಅನುದಾನ ಮೀಸಲಿಟ್ಟರೆ, ಸಿದ್ದರಾಮಯ್ಯ ಅವರು ಕೇವಲ ₹ 1,200 ಕೋಟಿ ಅನುದಾನ ನೀಡಿದ್ದಾರೆ ಎಂದು ಶಾಸಕ ಕುಮಾರ್ ಬಂಗಾರಪ್ಪ ದೂರಿದರು.

‘ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಅವರು ಹಿಂದಿನ ಅವಧಿಯಲ್ಲಿ ಬಗರ್ಹುಕುಂ ವಿಚಾರದಲ್ಲಿ ಭ್ರಷ್ಟಾಚಾರ ನಡೆಸಿದ್ದರಿಂದಲೇ ಜನರು ಸೋಲಿಸಿದರು. ಈಗ ಮತ್ತೊಮ್ಮೆ ಭ್ರಷ್ಟಾಚಾರ ನಡೆಸಲು ನನ್ನನ್ನು ತಮ್ಮ ಸಹೋದರನೇ ಅಲ್ಲ ಎಂದು ಹೇಳುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಚಿದೇವ ನಿಗಮದ ರಾಜ್ಯ ಅಧ್ಯಕ್ಷ ರಾಜು ತಲ್ಲೂರು, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಶೋಕಮೂರ್ತಿ, ಜಿಲ್ಲಾ ಅಧ್ಯಕ್ಷ ಮಾಲತೇಶ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಟಿ.ಡಿ. ಮೇಘರಾಜ್, ತಾಲ್ಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಶಿವಕುಮಾರ್ ಕಡಸೂರು, ಎಂ.ಡಿ. ಉಮೇಶ್, ಪ್ರಭಾಕರ ರಾಯ್ಕರ್, ವಿಶ್ವನಾಥ, ಶ್ರೀನಾಥ್, ನಟರಾಜ, ಟಿ.ಆರ್. ಸುರೇಶ್, ಹೃಷಿಕೇಶ್, ಪ್ರದೀಪ್, ಮಲ್ಲಿಕಾರ್ಜುನ ವೃತ್ತಿಕೊಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.