ಶಿವಮೊಗ್ಗ: ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಬದಲಾವಣೆಗೆ ಇನ್ನೂ ಅವಕಾಶವಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಅವರಿಗೆ ಟಿಕೆಟ್ ಕೊಡುವಂತೆ ದೆಹಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಶಿವಮೊಗ್ಗದಲ್ಲಿ ಶುಕ್ರವಾರ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಪುತ್ರ ಕಾಂತೇಶ ಅವರನ್ನು ಭೇಟಿಯಾಗಿ ಗೌಪ್ಯ ಚರ್ಚೆ ನಡೆಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪುತ್ರನಿಗೆ ಟಿಕೆಟ್ ತಪ್ಪಿರುವುದರಿಂದ ಈಶ್ವರಪ್ಪ ಅಸಮಾಧಾನಗೊಂಡಿದ್ದಾರೆ. ಅವರ ಮನವೊಲಿಸುವ ಪ್ರಯತ್ನ ನಡೆದಿದೆ ಎಂದರು.

ಇನ್ನೂ ಕೂಡಾ ಸಮಯ ಮೀರಿಲ್ಲ. ಚುನಾವಣೆ ಘೋಷಣೆ ಆಗಿಲ್ಲ. ಇನ್ನೂ ಸಾಕಷ್ಟು ಬದಲಾವಣೆಗೆ ಅವಕಾಶ ಇದೆ. ಈಶ್ವರಪ್ಪ ಅವರಿಗೆ ಪದೇ ಪದೇ ಅನ್ಯಾಯ ಆಗುತ್ತಿದೆ. ಅದನ್ನು ಸರಿಪಡಿಸಬೇಕು. ಎಲ್ಲವೂ ಸರಿ ಆಗುತ್ತದೆ ಎಂಬ ವಿಶ್ವಾಸ ಇದೆ. ಈಗಲೂ ಕಾಂತೇಶ್ ಗೆ ಹಾವೇರಿ ಟಿಕೆಟ್ ನೀಡಲು ಅವಕಾಶ ಇದೆ ಎಂದರು.

'ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು. ಸ್ಥಳೀಯವಾಗಿ ಸಂಜಯ್ ಪಾಟೀಲ, ಹಾಲಿ ಸಂಸದೆ ಮಂಗಳ ಅಂಗಡಿ ಇದ್ದಾರೆ. ನಾವು ಸ್ಥಳೀಯರಿಗೆ ಟಿಕೇಟ್ ನೀಡುವಂತೆ ಒತ್ತಾಯ ಮಾಡುತ್ತಿದ್ದೇವೆ. ಸ್ಥಳೀಯರಿಗೆ ಟಿಕೆಟ್ ಸಿಗುವ ವಿಶ್ವಾಸ ಇದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.