ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಅದೇ ಕುಟುಂಬದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.

ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳಿಗೆ ಬೆಂಕಿ ಹತ್ತಿ ಅದರಿಂದ ಎಲ್ಲರಿಗೂ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕುಟುಂಬದ ಹಿರಿಯರಾದ ಅರ್ಚಕ ಕೆಲಸ ಮಾಡುತ್ತಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರಳಸುರಳಿ ಹೊಸನಗರ ಮಾರ್ಗದಲ್ಲಿ ಕೋಕೋಡ್ ಗ್ರಾಮ ಇದೆ. ಗಾಯಾಳುವನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯಿಂದ ಗ್ರಾಮದ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಗೊತ್ತಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.