ಶಿವಮೊಗ್ಗ: ನಗರದ ಮಧ್ಯಭಾಗದಲ್ಲಿ ಹಾದುಹೋಗುವ ಬಿ.ಎಚ್. ರಸ್ತೆಯಲ್ಲಿ ನಿಯಮ ಮೀರಿ ಅಧಿಕ ಭಾರ ಹೊತ್ತ ಲಾರಿಗಳು ಸಂಚರಿಸುತ್ತಿವೆ. ಇದರಿಂದ ಶಾಲಾ ವಾಹನಗಳು ಮತ್ತು ಇತರೆ ವಾಹನ ಸವಾರರಿಗೆ ಅನಾನುಕೂಲವಾಗುತ್ತಿದೆ. ಸಾರಿಗೆ ಅಧಿಕಾರಿಗಳಿಗೆ ಈ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿಕಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವಿ. ವಿನೋದ್ ಆರೋಪಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಧಿಕ ಭಾರ ಹೊತ್ತ ಲಾರಿಗಳು, ಮಾನವ ಜೀವಕ್ಕೆ ಹಾನಿ ಉಂಟುಮಾಡುವ ಪದಾರ್ಥಗಳನ್ನು ಕೊಂಡೊಯ್ಯುತ್ತಿವೆ. ಟಾರ್ಪಾಲ್ ಹಾಕಿ ಮುಚ್ಚಿರುವುದಿಲ್ಲ. ಅಧಿಕ ಭಾರದಿಂದಾಗಿ ರಸ್ತೆಗಳು ಕೂಡ ಹಾಳಾಗುತ್ತವೆ. ಸಾರಿಗೆ ನಿಯಮಗಳನ್ನು ನಿರಂತರವಾಗಿ ಉಲ್ಲಂಘಿಸುತ್ತಿದ್ದಾರೆ ಎಂದರು.

ಇದರ ಹಿಂದೆ ದೊಡ್ಡ ಲಾಬಿಯೇ ಇದ್ದು, ಶಿವಮೊಗ್ಗ ಜಂಟಿ ಆಯುಕ್ತರು ಸೇರಿದಂತೆ ಸಾರಿಗೆ ಇಲಾಖೆಯ ಅಧಿಕಾರಿಗಳು ಶಾಮಿಲಾಗಿದ್ದಾರೆ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸರ್ಕಾರ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಆರ್‌ಟಿಒ ಕಚೇರಿಯಲ್ಲಿ ಕಳೆದ 3 ವರ್ಷಗಳಿಂದ ₹60 ಸಾವಿರ ವೆಚ್ಚದಲ್ಲಿ ಅಳವಡಿಸಿ ಸಿ.ಸಿ.ಟಿ.ವಿ ಕ್ಯಾಮೆರಾ ಕಾರ್ಯ ನಿರ್ವಹಿಸುತ್ತಿಲ್ಲ ಎಂದರು.

ಈ ಸಂದರ್ಭದಲ್ಲಿ ಜಯಣ್ಣ, ಶಿವಣ್ಣ, ನೇತ್ರಾವತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.