ಶಿವಮೊಗ್ಗ: ಕ್ಷಯರೋಗ ನಿಯಂತ್ರಣದಲ್ಲಿ ಉತ್ತಮ ಕಾರ್ಯನಿರ್ವಹಣೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಶಿವಮೊಗ್ಗ ಜಿಲ್ಲೆಗೆ ಕಂಚಿನ ಪದಕ ನೀಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದಸೋಮವಾರ ಹಮ್ಮಿಕೊಂಡಿದ್ದ ಕ್ಷಯರೋಗ ಮತ್ತು ಅದರ ನಿರ್ಮೂಲನೆ ಕುರಿತು ಎಲ್ಇಡಿ ಪರದೆ ಮೂಲಕ ಮಾಹಿತಿ ನೀಡುವ ಮಾಹಿತಿ-ಶಿಕ್ಷಣ-ಸಂವಹನ ಪ್ರಚಾರ ವಾಹನಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2025ರೊಳಗೆ ಇಡೀ ದೇಶವನ್ನು ಕ್ಷಯಮುಕ್ತ ಎಂದು ಘೋಷಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಈ ಕಾರಣ ಎಲ್ಲ ರಾಜ್ಯಗಳು ಮತ್ತು ಜಿಲ್ಲೆಯಾದ್ಯಂತ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕ್ಷಯ ರೋಗ ಕುರಿತು ಮಾಹಿತಿ, ಶಿಕ್ಷಣ, ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆಯಂತಹ ಚಟುವಟಿಕೆ ಹಮ್ಮಿಕೊಳ್ಳಲಾಗಿದೆಎಂದರು.

ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಘೋಷಿಸುವ ಸಲುವಾಗಿ ಜಿಲ್ಲೆಯಲ್ಲಿ 19 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿ ಈಗಾಗಲೇ ಟಾಸ್ಕ್ಫೋರ್ಸ್ ಸಮಿತಿ ರಚಿಸಲಾಗಿದೆ. ಗ್ರಾಮ ಪಂಚಾಯಿತಿ ಪಿಡಿಒ, ಸದಸ್ಯರು ಹಾಗೂ ಇತರೆ ಸಿಬ್ಬಂದಿಗೆ ಕ್ಷಯರೋಗ ನಿರ್ಮೂಲನೆ ಕುರಿತು ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕ್ಷಯರೋಗ ನಿರ್ಮೂಲನೆ ಕುರಿತು ಮಾಹಿತಿ–ಶಿಕ್ಷಣ-ಸಂವಹನ ನೀಡುವ ಈ ಪ್ರಚಾರದ ವಾಹನವು ಜಿಲ್ಲೆಯ 12 ಕಡೆಗಳಲ್ಲಿ ಪ್ರಚಾರ ಕೈಗೊಳ್ಳಲಿದೆ. ಪ್ರತಿ ಕಡೆಗಳಲ್ಲಿ 3ಕ್ಕೆ ಕಾಲ ಕ್ಷಯರೋಗದ ಲಕ್ಷಣಗಳು, ಚಿಕಿತ್ಸೆ ಕ್ರಮ ಇತ್ಯಾದಿ ಕುರಿತು ಮಾಹಿತಿಯನ್ನು ಬಿತ್ತರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿಮಾಡಿದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಕ್ಷಯರೋಗ ಮತ್ತು ಅದರ ನಿರ್ಮೂಲನೆ ಕುರಿತು ಎಲ್ಇಡಿ ಪರದೆ ಮೂಲಕ ಮಾಹಿತಿ ನೀಡುವ ಮಾಹಿತಿ–ಶಿಕ್ಷಣ–ಸಂವಹನ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.

ಆರ್ಸಿಎಚ್ಒ ಡಾ.ನಾಗರಾಜ್ ನಾಯ್ಕ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ದಿನೇಶ್, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಒ.ಮಲ್ಲಪ್ಪ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ ನಾಗಲೀಕರ್, ಎಸ್.ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.