ಶಿವಮೊಗ್ಗ: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷ ಕಠಿಣ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ.

ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ರಾಹಿಲ್ ಖಾನ್ (22) ಹಾಗೂ ವಿನೋಬ ನಗರದ ನಿವಾಸಿ ರೋಹನ್ (19) ಶಿಕ್ಷೆಗೊಳಗಾದವರು.

ಇಬ್ಬರೂ 2020ರ ಸೆಪ್ಟೆಂಬರ್ 5ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಬಂಧಿಸಿ ₹10,150 ಮೌಲ್ಯದ 1,150 ಗ್ರಾಂ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ₹16,000 ಮೌಲ್ಯದ ಬೈಕ್ ವಶಪಡಿಸಿಕೊಂಡಿದ್ದರು.

ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ ಐ ಮಂಜುನಾಥ್ ಪ್ರಕರಣದ ತನಿಖೆ ಕೈಗೊಂಡು, ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದಲ್ಲಿ ಸರ್ಕಾರಿ ವಕೀಲ ಸುರೇಶ್ ವಾದ ಮಂಡಿಸಿದ್ದರು. ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.