ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಹಾಲಿ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.

ಅದಕ್ಕೆ ಪೂರಕವಾಗಿ ಸೋಮವಾರ ಇಲ್ಲಿ ನಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ನಾರಾಯಣಸ್ವಾಮಿ ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ಬಿಂಬಿತರಾದರು.

ಆದರೆ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಯಾರಿಗೆ ಎಂಬುದನ್ನು ಬಿಜೆಪಿ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ.

ಸಮಾರಂಭದಲ್ಲಿ ಶಿವಮೊಗ್ಗ, ದಾವಣಗೆರೆ, ಉಡುಪಿ-ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿಗಳ ಜೊತೆ ಚಿತ್ರದುರ್ಗ ಕ್ಷೇತ್ರದಿಂದ ನಾರಾಯಸ್ವಾಮಿ ಕೂಡ ಭಾಗಿಯಾಗಿದ್ದರು. ಐದು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪೈಕಿ ಚಿತ್ರದುರ್ಗದಿಂದ ನಾರಾಯಣಸ್ವಾಮಿ ಅವರ ಭಾವಚಿತ್ರ ಪ್ರದರ್ಶಿಸಲಾಯಿತು.

ತಾವು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಾರಾಯಣಸ್ವಾಮಿ ಪ್ರಕಟಿಸಿದ್ದರು. ಹೀಗಾಗಿ ಚಿತ್ರದುರ್ಗದಿಂದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಂಸದ ಜನಾರ್ದನ ಸ್ವಾಮಿ, ನಿವೃತ್ತ ಅಧಿಕಾರಿ ಲಕ್ಷ್ಮೀನಾರಾಯಣ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಪುತ್ರ ಎಂ.ಸಿ.ರಘುಚಂದನ ಹೆಸರು ಕೇಳಿಬಂದಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಕೂಡ ಪಾಲ್ಗೊಂಡಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.