ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಪಡಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ತಿಳಿಸಬೇಕು ಎಂದು ಒತ್ತಾಯಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ನಗರದಲ್ಲಿ ನ.4 ಮತ್ತು 5ರಂದು ನಡೆಯಲಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಯದುವೀರ ಅವರನ್ನು ನಗರದ ಹೊರವಲಯದಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದರು.

‘ಅಂದಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿ ಹಾಗೂ ಪರಿಶ್ರಮದ ಫಲವಾಗಿ ನಿರ್ಮಾಣಗೊಂಡಿರುವ ವಿಐಎಸ್ಎಲ್ ಕಾರ್ಖಾನೆಯನ್ನು ಅಭಿವೃದ್ಧಿಗೊಳಿಸಬೇಕು ಎಂಬುದು ಕ್ಷೇತ್ರದ ನಾಗರಿಕರ ಆಶಯವಾಗಿದೆ. ತಾವು ಕಾರ್ಖಾನೆಯ ಶತಮಾನೋತ್ಸವ ಉದ್ಘಾಟಿಸುತ್ತಿರುವುದು ಸಂತಸ ತಂದಿದ್ದು, ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಶಿಫಾರಸು ಮಾಡಬೇಕು’ ಎಂದು ಕೋರಿದರು.

ಸಂಘದ ಗೌರವಾಧ್ಯಕ್ಷ ಬಾಲಕೃಷ್ಣ, ಅಧ್ಯಕ್ಷ ಆರ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬಿ.ಜಗದೀಶ್, ಖಜಾಂಚಿ ಬಿ.ಶಂಕರನಾಯ್ಕ, ಸಹ ಕಾರ್ಯದರ್ಶಿ ಮಂಜು, ಸಲಹೆಗಾರ ಸತ್ಯ ಭದ್ರಾವತಿ, ವಿಲ್ಸನ್ ಬಾಬು, ಭಾಸ್ಕರ್ ಬಾಬು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.