ತುಮಕೂರು: ಜಿಲ್ಲೆಯಲ್ಲಿ 2023ರ ಜ.5 ರಿಂದ ಅ.27ರ ವರೆಗೆ 15,511 ನಕಲಿ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ರಾಜಕೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿದರು.

ಅ.27ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. 55,650 ಯುವ ಮತದಾರರನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ. ಜಿಲ್ಲೆಯಲ್ಲಿ 11,23,062 ಪುರುಷರು, 11,32,016 ಮಹಿಳೆಯರು ಹಾಗೂ 104 ಇತರೆ ಮತದಾರರು ಸೇರಿ ಒಟ್ಟು 22,55,182 ಮತದಾರರಿದ್ದಾರೆ. ಇದರಲ್ಲಿ 30,572 ಅಂಗವಿಕಲರು, 707 ಮಂದಿ ಶತಾಯುಷಿ ಮತದಾರರಿದ್ದಾರೆ ಎಂದು ವಿವರಿಸಿದರು.

ಎಲ್ಲ 2615 ಮತಗಟ್ಟೆ, ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕಚೇರಿ ಹಾಗೂ ceo.karnataka.gov.in ಮತ್ತು tumkur.nic.in ವೆಬ್‌ಸೈಟ್‌ನಲ್ಲಿ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿ.9ರ ವರೆಗೆ ಅವಕಾಶ ಕಲ್ಪಿಸಿದೆ ಎಂದು ಮಾಹಿತಿ ನೀಡಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಸಂಬಂಧ 1-11-2023ನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ ಮತದಾರರ ಪಟ್ಟಿ ತಯಾರಿಸಲು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದೆ. ಡಿ.30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಹೊನ್ನವಳ್ಳಿ ಹೋಬಳಿ ಹೊಸ ಪಟ್ಟಣ ಹಾಗೂ ಹೊನ್ನೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 2 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.