ತುಮಕೂರು: ತಾಲ್ಲೂಕಿನ ಬೆಳ್ಳಾವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಸರ್ಕಾರ ₹5 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಬಿ.ಸುರೇಶ್ಗೌಡ ತಿಳಿಸಿದ್ದಾರೆ.

ಬಾಡಿಗೆ ಕಟ್ಟಡದಲ್ಲಿ ಕಾಲೇಜಿನ ತರಗತಿಗಳು ನಡೆಯುತ್ತಿದ್ದು, ಸರ್ಕಾರದ ಅನುದಾನದಿಂದ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಕಟ್ಟಡ ನಿರ್ಮಾಣಕ್ಕೆ ಎರಡು ತಿಂಗಳ ಹಿಂದೆ ಸರ್ಕಾರ 5 ಎಕರೆ ಜಮೀನು ಮಂಜೂರು ಮಾಡಿದೆ. ಇಲ್ಲಿ ನೂತನ ಕಟ್ಟಡ, ಕಾಂಪೌಂಡ್ ನಿರ್ಮಿಸಲಾಗುವುದು. ಉಪಕರಣ ಖರೀದಿ, ಇತರೆ ಸೌಲಭ್ಯ ಒದಗಿಸಲು ಅನುದಾನ ಬಳಸಲಾಗುವುದು ಎಂದು ಹೇಳಿದ್ದಾರೆ.

ಈ ಕಾಲೇಜಿನಲ್ಲಿ ಪರಿಶಿಷ್ಟ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳು ಹೆಚ್ಚಾಗಿ ಅಧ್ಯಯನ ಮಾಡುತ್ತಿದ್ದಾರೆ. ಬೆಳ್ಳಾವಿಯಲ್ಲಿ ಒಂದು ಪ್ರಥಮ ದರ್ಜೆ ಕಾಲೇಜು ಇರಲಿಲ್ಲ. ಇಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಿಂದಿನ ಸರ್ಕಾರದಲ್ಲಿ ನೊಣವಿನಕೆರೆಯಿಂದ ಬೆಳ್ಳಾವಿಗೆ ಕಾಲೇಜು ವರ್ಗಾವಣೆ ಮಾಡಲಾಗಿತ್ತು ಎಂದು ಸ್ಮರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.