ತಿಪಟೂರು: ಲಾಕ್ಡೌನ್ ಪರಿಣಾಮ ಕೆಲ ಉದ್ಯಮ, ವ್ಯಾಪಾರಗಳಿಗೆ ತೊಂದರೆ ಆಗಿದೆ. ಅಂತಹವರಿಗೆ ಅನುಕೂಲವಾಗಲೆಂದು ಸತ್ಯಗಣಪತಿ ಸೇವಾ ಟ್ರಸ್ಟ್ ಸಹಯೋಗದಲ್ಲಿ ಆಹಾರದ ಕಿಟ್ ನೀಡಲಾಗುತ್ತಿದೆ ಎಂದು ಶಾಸಕ ಬಿ.ಸಿ. ನಾಗೇಶ್ ತಿಳಿಸಿದರು.

ನಗರದ ಸತ್ಯಗಣಪತಿ ಆಸ್ಥಾನ ಮಂಟಪದ ಆವರಣದಲ್ಲಿ ಸತ್ಯಗಣಪತಿ ಸೇವಾ ಟ್ರಸ್ಟ್ ಸೇರಿದಂತೆ ವಿವಿಧ ದಾನಿಗಳ ಕೊಡುಗೆಯಿಂದ ತಾಲ್ಲೂಕಿನ ವಿವಿಧ ವರ್ಗದವರಿಗೆ ಸುಮಾರು ಐದು ಸಾವಿರ ಉಚಿತ ಆಹಾರ ಕಿಟ್ಗಳ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಲಾಕ್ಡೌನ್ನಿಂದ ಅನೇಕ ವರ್ಗದ ಕಾರ್ಮಿಕರು, ದಿನಗೂಲಿ ನೌಕರರು ಕೆಲಸವಿಲ್ಲದೇ ಮನೆಯಲ್ಲಿ ಉಳಿಯುವಂತಾಗಿದೆ. ಕುಟುಂಬದ ನಿರ್ವಹಣೆ ಮಾಡಲು ಅಶಕ್ತರಾಗಿರುವ ಸ್ಥಿತಿಯಲ್ಲಿದ್ದಾರೆ. ಅಂತಹ ವರ್ಗದ ಜನರಿಗೆ ಅನುಕೂಲವಾಗಲೆಂದು ಆಹಾರದ ಕಿಟ್ ನೀಡಲು ಯೋಜನೆ ರೂಪಿಸಲಾಗಿದೆ ಎಂದರು.

ಸೋಂಕು ತಡೆಗಟ್ಟುವುದು ಕೇವಲ ಅಧಿಕಾರಿಗಳ ಕರ್ತವ್ಯವಲ್ಲ. ನಾಗರಿಕರು ಕೂಡ ಸಹಕಾರ ನೀಡಬೇಕು ಎಂದು ಹೇಳಿದರು.

ಈಗಾಗಲೇ ಸತ್ಯ ಗಣಪತಿ ಟ್ರಸ್ಟ್ನೊಂದಿಗೆ ಹಲವು ಉದ್ಯಮಿಗಳು, ದಾನಿಗಳು ಕೈ ಜೋಡಿಸಿದ್ದಾರೆ. ಒಟ್ಟು 5 ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ನೀಡಲು ಸಿದ್ಧರಾಗಿದ್ದು ಈಗಾಗಲೇ ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ವಿತರಣೆ ಮಾಡಲಾಗಿದೆ ಎಂದರು.

ಟ್ರಸ್ಟ್ ಅಧ್ಯಕ್ಷ ಶ್ರೀಕಂಠ ರವಿಶಂಕರ್, ನಗರಸಭೆ ಅಧ್ಯಕ್ಷ ಪಿ.ಜೆ. ರಾಮಮೋಹನ್, ನಗರಸಭಾ ಮಾಜಿ ಸದಸ್ಯ ಸಿಂಗ್ರಿ ದತ್ತಪ್ರಸಾದ್, ಲೋಕೇಶ್, ಶ್ರೀವತ್ಸ, ದಿನೇಶ್ ಸೋಲಂಕಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.