ಭಾನುವಾರ, 22 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾ: ಅದ್ದೂರಿ ಗಣೇಶ ವಿಸರ್ಜನಾ ಮೆರವಣಿಗೆ

Published : 22 ಸೆಪ್ಟೆಂಬರ್ 2024, 6:19 IST
Last Updated : 22 ಸೆಪ್ಟೆಂಬರ್ 2024, 6:19 IST
ಫಾಲೋ ಮಾಡಿ
Comments

ಶಿರಾ: ನಗರದ ಗವಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿಯನ್ನು ಶನಿವಾರ ವಿಸರ್ಜಿಸಲಾಯಿತು. ಜನಪದ ಕಲಾತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಿತು.

ನಗರದಲ್ಲಿ ಹಬ್ಬದ ವಾತಾರಣ ಮೂಡಿತ್ತು. ಎಲ್ಲಿ ನೋಡಿದರು ಕೇಸರಿ ಬಾವುಟ ರಾಜಾಜಿಸುತ್ತಿದ್ದವು. ವರ್ತಕರು ಅಂಗಡಿಗಳನ್ನು ಮುಚ್ಚಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜಿಲ್ಲೆಯ ವಿವಿಧ ಕಡೆಗಳಿಂದ ಬಂದಿದ್ದ ಸಾವಿರಾರು ಮಂದಿ ಭಾಗವಹಿಸಿದ್ದರು.

ಗವಿ ಆಂಜನೇಯ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಮುಖ್ಯ ರಸ್ತೆಯ ಮೂಲಕ‌ ಸಾಗಿ ಬನ್ನಿ ಮಂಟಪ ತಲುಪಿ ಅಲ್ಲಿಂದ ಖಾಸಗಿ ಬಸ್‌ ನಿಲ್ದಾಣದ ಮೂಲಕ ಮಲ್ಲಿಕ್ ರೆಹಾನ್ ದರ್ಗಾ ವೃತ್ತ ತಲುಪಿತು. ಅಲ್ಲಿಂದ ವಾಪಸ್‌ ತೆರಳಿ ಬಾಲಾಜಿ ನಗರದ ಮೂಲಕ ವಿದ್ಯಾನಗರದಲ್ಲಿರುವ ಜಾಜಿಕಟ್ಟೆಯಲ್ಲಿ ವಿಸರ್ಜಿಸಲಾಯಿತು.

ಬಿಗಿ ಬಂದೋಬಸ್ತು: ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿತ್ತು. ಹೆಚ್ಚುವರಿ ಎಸ್‌ಪಿ ವಿ.ಮರಿಯಪ್ಪ ನೇತೃತ್ವದಲ್ಲಿ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿತ್ತು.

ಪಟ್ಟನಾಯಕನಹಳ್ಳಿಯ ನಂಜಾವಧೂತ ಸ್ವಾಮೀಜಿ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ, ನಾರು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಆರ್.ಉಗ್ರೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ನಗರಸಭೆ ಅಧ್ಯಕ್ಷ ಜೀಷಾನ್ ಮಹಮೂದ್, ಉಪಾಧ್ಯಕ್ಷ ಲಕ್ಷ್ಮಿಕಾಂತ್, ಸದಸ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT