ತುಮಕೂರು: ‘ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್’ ಸಂಘಟನೆ ವತಿಯಿಂದ ಅ.2 ಮತ್ತು 3ರಂದು ಬೆಳಗಾವಿ ನಗರದಲ್ಲಿ ರಾಷ್ಟ್ರೀಯ ಸಮಾವೇಶ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ರಾಜ್ಯಕ್ಕೆ ಕುರುಬ ಸಮುದಾಯದ ಕೊಡುಗೆ ಬಹಳಷ್ಟಿದೆ. ಸಮುದಾಯದ ಹಲವು ನಾಯಕರು ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಯೋಜನೆಗಳ ಮುಖಾಂತರ ಸಮಾಜದಲ್ಲಿನ ಬಡವರ ನೆರವಿಗೆ ನಿಂತಿದ್ದಾರೆ. ಕನಕ ಜಯಂತಿಯ ಮೂಲಕ ಕುರುಬ ಸಮಾಜದ ಸಂಘಟನೆಗೆ ಕಾರಣರಾದರು. ಸಮಾಜದ ಒಗ್ಗಟ್ಟಿನಿಂದ ಅವರು ಮುಖ್ಯಮಂತ್ರಿಯಾಗಿದ್ದಾರೆ. ಸಮಾವೇಶದಲ್ಲಿ ಅವರನ್ನು ಗೌರವಿಸಲಾಗುವುದು ಎಂದು ಕುರುಬ ಸಮುದಾಯದ ಹಿರಿಯ ಮುಖಂಡ ಎಚ್.ಎಂ.ರೇವಣ್ಣ ತಿಳಿಸಿದರು.

ನಗರದಲ್ಲಿ ಗುರುವಾರ ಸಮಾವೇಶದ ಪ್ರಯುಕ್ತ ಸಮುದಾಯದ ಮುಖಂಡರ ಜತೆ ಪೂರ್ವಭಾವಿ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

ರಾಷ್ಟ್ರದಲ್ಲಿ ಸುಮಾರು 15 ಕೋಟಿ ಕುರುಬ ಸಮುದಾಯದ ಜನರಿದ್ದಾರೆ. ಅವರೆಲ್ಲರನ್ನು ಒಗ್ಗೂಡಿಸುವ ಉದ್ದೇಶದಿಂದ ಸಮ್ಮೇಳನ ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ನಡೆಯುವ 9ನೇ ಸಮ್ಮೇಳನದಲ್ಲಿ ಮಹಾರಾಷ್ಟ್ರ, ಉತ್ತರ ಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳ ಮಂತ್ರಿಗಳು, ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಬೇಕು, ಒಬಿಸಿ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎಂಬುದು ಸೇರಿದಂತೆ ಇತರೆ ಹತ್ತು ಪ್ರಮುಖ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ತಿಳಿಸಿದರು.

ಕಾಗಿನೆಲೆ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ‘ಸಮಾವೇಶದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು. ದೇಶದಲ್ಲಿರುವ ಎಲ್ಲ ಕುರುಬರನ್ನು ಒಂದು ಕಡೆ ಸೇರಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.

ಶ್ರೀದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್, ಬಿಂದುಶೇಖರ್ ಒಡೆಯರ್, ಕುರುಬ ಸಮುದಾಯದ ಮುಖಂಡರಾದ ಮೈಲಪ್ಪ, ಸುರೇಶ್, ಗುರು, ಕೆಂಪರಾಜು, ಕೆ.ಜೆ.ಪರಶುರಾಮ್, ರವೀಶ್, ದೊಡ್ಡಯ್ಯ, ಸುನೀತಾ, ನಿಕೇತ್‌ರಾಜ್ ಮೌರ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.