ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಂಜಿನಿಯರಿಂಗ್ ಕೋರ್ಸ್‌ ಶುಲ್ಕ ಹೆಚ್ಚಳ ಆದೇಶ ವಾಪಸ್‌ಗೆ ಆಗ್ರಹ

Published 15 ಜೂನ್ 2024, 16:24 IST
Last Updated 15 ಜೂನ್ 2024, 16:24 IST
ಅಕ್ಷರ ಗಾತ್ರ

ತುಮಕೂರು: ಎಂಜಿನಿಯರಿಂಗ್‌ ಕಾಲೇಜಿನ ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎಐಡಿಎಸ್‌ಒ ಸಂಘಟನೆ ಖಂಡಿಸಿದೆ.

‘ಖಾಸಗಿ ಕಾಲೇಜುಗಳ ಸರ್ಕಾರಿ ಕೋಟಾದಡಿ ₹96,574ರಿಂದ ₹1.06 ಲಕ್ಷಕ್ಕೆ ಶುಲ್ಕ ಹೆಚ್ಚಿಸಿದ್ದು, ಟೈಪ್-1 ಕಾಲೇಜುಗಳಲ್ಲಿ ₹1.69 ಲಕ್ಷದಿಂದ ₹1.86 ಲಕ್ಷಕ್ಕೆ ಹಾಗೂ ಟೈಪ್-2 ಕಾಲೇಜುಗಳಲ್ಲಿ ₹2.37 ಲಕ್ಷದಿಂದ ₹2.61 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದು ವಿದ್ಯಾರ್ಥಿ ವಿರೋಧಿ ನಡೆಯಾಗಿದೆ ಎಂದು ಎಐಡಿಎಸ್‍ಒ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಲಕ್ಕಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮ್ಯಾನೇಜ್‌ಮೆಂಟ್‌ ಕೋಟಾದಡಿ ಮನಸೋಇಚ್ಛೆ ಶುಲ್ಕ ಹೆಚ್ಚಿಸಲಾಗಿದೆ. ಬೆಂಗಳೂರಿನ ಕಾಲೇಜೊಂದರಲ್ಲಿ ಮ್ಯಾನೇಜ್‌ಮೆಂಟ್‌ ಸೀಟಿನ ಶುಲ್ಕ ₹26 ಲಕ್ಷ ಇದೆ. ಇಂತಹ ಸಮಯದಲ್ಲಿ ಸರ್ಕಾರಿ ಕಾಲೇಜು, ಸರ್ಕಾರಿ ಕೋಟಾದಡಿ ಶುಲ್ಕ ಏರಿಸಬಾರದಿತ್ತು. ಪ್ರತಿ ವರ್ಷ ಶೈಕ್ಷಣಿಕ ಶುಲ್ಕ ಏರಿಕೆ ಮಾಡಿ ಶಿಕ್ಷಣವನ್ನು ಸಂಪೂರ್ಣವಾಗಿ ವ್ಯಾಪಾರೀಕರಣ ಮಾಡಲು ಸರ್ಕಾರವೇ ಅನುಮತಿ ನೀಡುತ್ತಿದೆ ಎಂದು ದೂರಿದ್ದಾರೆ.

ಖಾಸಗಿ ಕಾಲೇಜುಗಳಲ್ಲಿ ಎಂಜಿನಿಯರಿಂಗ್‌ ಶಿಕ್ಷಣ ಪಡೆಯುವುದು ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳಿಗೆ ಸವಾಲಾಗಿದೆ. ಹೀಗೆ ಶುಲ್ಕ ಹೆಚ್ಚಳ ಮಾಡಿದರೆ ಮುಂದಿನ ದಿನಗಳಲ್ಲಿ ಮಧ್ಯಮ ವರ್ಗದ ವಿದ್ಯಾರ್ಥಿಗಳು ಎಂಜಿನಿಯರಿಂಗ್‌ ಶಿಕ್ಷಣದಿಂದ ವಂಚಿತರಾಗುತ್ತಾರೆ. ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT