ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಮಂಗಳವಾರ ಬಂದ್ಗೆ ಕರೆ ನೀಡಿದ್ದು, ನಗರದಲ್ಲಿ ವಾಣಿಜ್ಯ ವಹಿವಾಟು ಬಂದ್ ಮಾಡಲಾಗಿತ್ತು.

ನಗರದ ಎಂ.ಜಿ.ರಸ್ತೆ, ಬಿ.ಎಚ್.ರಸ್ತೆ, ಅಶೋಕ ರಸ್ತೆ, ಮಂಡಿಪೇಟೆ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ವರ್ತಕರು ಅಂಗಡಿಗಳನ್ನು ಮುಚ್ಚಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿದರು. ಬಸ್, ಆಟೊ ಸಂಚಾರ ಸಾಮಾನ್ಯವಾಗಿತ್ತು.

ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ಮುಖಂಡರು ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ಬೆಳಗ್ಗೆ ಎಸ್.ಎಸ್.ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಯಾವುದೇ ಕಾರಣಕ್ಕೂ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಘೋಷಿಸಿದರು.

ಹೋರಾಟ ಸಮಿತಿಯ ಭಾಗವಾಗಿರುವ ಬಿಜೆಪಿ, ಜೆಡಿಎಸ್ ಬೆಂಬಲ ವ್ಯಕ್ತಪಡಿಸಿದೆ. ಕನ್ನಡಪರ ಸಂಘಟನೆಗಳು ಹೋರಾಟದಲ್ಲಿ ತೊಡಗಿಸಿಕೊಂಡಿವೆ. ರೈತ ಸಂಘಟನೆಗಳು, ವಕೀಲರ ಸಂಘ, ಆಟೊ ಯೂನಿಯನ್, ವಿವಿಧ ಮಠಾಧೀಶರು, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಬಂದ್ನಲ್ಲಿ ಭಾಗವಹಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.