ಶುಕ್ರವಾರ, 27 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭದ್ರಾ ಮೇಲ್ದಂಡೆ: ಶೀಘ್ರ ₹5,300 ಕೋಟಿ ಬಿಡುಗಡೆ

ಸಂಸದ ಗೋವಿಂದ ಕಾರಜೋಳ ಭರವಸೆ
Published : 18 ಜೂನ್ 2024, 15:29 IST
Last Updated : 18 ಜೂನ್ 2024, 15:29 IST
ಫಾಲೋ ಮಾಡಿ
Comments

ಶಿರಾ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಬಿಡುಗಡೆಯಾಗ ಬೇಕಿರುವ ₹5,300 ಕೋಟಿಯನ್ನು ತ್ವರಿತವಾಗಿ ತರುವ ಮೂಲಕ ಯೋಜನೆಯನ್ನು ಶೀಘ್ರವಾಗಿ ಕೈಗೊಳ್ಳುವ ಮೂಲಕ ಈ ಭಾಗಕ್ಕೆ ನೀರು ಹರಿಸುವುದಾಗಿ ಸಂಸದ ಗೋವಿಂದ ಕಾರಜೋಳ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಜೆಡಿಎಸ್– ಬಿಜೆಪಿ ಕಾರ್ಯಕರ್ತರಿಗೆ ನಡೆದ ಕೃತಜ್ಞತಾ ಸಮಾವೇಶದಲ್ಲಿ ಅವರು ಮಾತನಾಡಿದರು.

ತುಮಕೂರು- ದಾವಣಗೆರೆ ರೈಲ್ವೆ ಯೋಜನೆ ನನೆಗುದಿಗೆ ಬಿದ್ದಿದೆ. ಶೀಘ್ರವಾಗಿ ಯೋಜನೆಯನ್ನು ಕೈಗೆತ್ತಿಕೊಂಡು ಈ ಅವಧಿಯಲ್ಲಿಯೇ ಮುಕ್ತಾಯಗೊಳಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆತಂದು ಉದ್ಘಾಟನೆ ಮಾಡಿಸಲಾಗುವುದು ಎಂದರು.

ಎತ್ತಿನಹೊಳೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಗಾಗಿ ಘೋಷಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು, ಕೇಂದ್ರದಲ್ಲಿ ಕುಂಚಿಟಿಗ ಸಮುದಾಯವನ್ನು ಒಬಿಸಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮಾತನಾಡಿ, ನೂತನ ಸಂಸದರು ಈ ಭಾಗದ ಅಭಿವೃದ್ಧಿಗೆ ಅಧ್ಯತೆ ನೀಡಬೇಕು. ಭದ್ರ ಯೋಜನೆ, ದಾವಣಗೆರೆ- ತುಮಕೂರು ರೈಲು ಮಾರ್ಗವನ್ನು ತ್ವರಿತವಾಗಿ ಮಾಡಿಸುವ ಕೆಲಸ ಮಾಡಬೇಕು ಎಂದರು.

ಮನವಿ ಪತ್ರ ಸಲ್ಲಿಕೆ: ನೂತನ ಸಂಸದ ಗೋವಿಂದ ಕಾರಜೋಳ ಅವರಿಗೆ ವಿಧಾನ ಪರಿಷತ್ ಸದಸ್ಯ ಕ್ಷೇತ್ರ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಮನವಿ ಪತ್ರ ಸಲ್ಲಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ, ಮಾಜಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ.ಮಂಜುನಾಥ್, ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಆರ್.ಉಗ್ರೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಚಂಗಾವರ ಮಾರಣ್ಣ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಚಿಕ್ಕಣ್ಣ, ಗಿರಿಧರ್, ಮದ್ದೇವಳ್ಳಿ ರಾಮಕೃಷ್ಣ, ಅಂಬುಜಾ ನಟರಾಜು, ಆರ್.ರಾಮು, ರಾಘವೇಂದ್ರ, ನರಸಿಂಹಮೂರ್ತಿ, ಕದಿರೆಹಳ್ಳಿ ಮೂರ್ತಿ, ಶ್ರೀನಿವಾಸ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT