ಮಧುಗಿರಿ: ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್ಗೆ ಪಟ್ಟಣದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಸೋಮವಾರ ಬೆಳಿಗ್ಗೆಯಿಂದಲೇ ಎಂದಿನಂತೆ ಅಂಗಡಿಮುಂಗಟ್ಟುಗಳು, ಸಾರಿಗೆ, ಆಟೊ, ಸರ್ಕಾರಿ ಕಚೇರಿಗಳು ಹಾಗೂ ಪೆಟ್ರೋಲ್ ಬಂಕ್ಗಳು ಕಾರ್ಯ ನಿರ್ವಹಿಸಿದವು. ರೈತ ಸಂಘ, ಕನ್ನಡಪರ ಸಂಘಟನೆ, ದಲಿತ ಪರ ಸಂಘಟನೆ, ಸಿಐಟಿಯು ಸೇರಿದಂತೆ ಅನೇಕ ಸಂಘಟನೆಯ ಪದಾಧಿಕಾರಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.

ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜೆ.ಸಿ. ಶಂಕರಪ್ಪ ಮಾತನಾಡಿ, ಮಧುಗಿರಿ ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿ ಪ್ರತಿ ಎಕರೆಗೆ ₹ 25 ಸಾವಿರ ಪರಿಹಾರ ನೀಡಬೇಕು. ಎತ್ತಿನಹೊಳೆ ಯೋಜನೆಯ ಭೂ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಬೆಳೆ ವಿಮೆ ಪರಿಹಾರ ಹಣವನ್ನು ರೈತರಿಗೆ ವಿತರಿಸಬೇಕೆಂದು ಒತ್ತಾಯಿಸಿದರು.

ಉಪ ವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ದೊಡ್ಡಮಾಳಯ್ಯ, ರಾಜಶೇಖರ್, ಮೂಡ್ಲಗಿರಿಯಪ್ಪ, ಲಕ್ಷ್ಮೀಪತಿ, ನಾಗರತ್ನಮ್ಮ, ಭಾಗ್ಯಮ್ಮ, ಲಲಿತಮ್ಮ, ವನರಾಜು, ನಾಗರಾಜು, ಚಿಕ್ಕಣ್ಣ, ಜಯರಾಮು, ಶೂದ್ರ ಬಳಗದ ದಿಲೀಪ್, ಭೂಮಿ ಹೋರಾಟಗಾರ ಹಂದ್ರಾಳು ನಾಗಭೂಷಣ, ಅಂಗನವಾಡಿ ನೌಕರರ ಸಂಘದ ಉಪಾಧ್ಯಕ್ಷೆ ಪಾರ್ವತಮ್ಮ, ಕಮಲಮ್ಮ, ಬೆಟ್ಟಪ್ಪ, ಪೋತರಾಜು, ಕಮಲಮ್ಮ, ಮಹಾಲಿಂಗಪ್ಪ, ರಂಗಧಾಮಯ್ಯ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.