ಗುಬ್ಬಿ: ತಾಲ್ಲೂಕಿನ ಗಡಿಭಾಗ ಹೊಸಪಾಳ್ಯ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ–73ರಲ್ಲಿ ಮಂಗಳವಾರ ಬೆಳಗ್ಗೆ ಕಾರು ಹಾಗೂ ಟಿವಿಎಸ್ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರು ಕಡೆ ಸಾಗುತ್ತಿದ್ದ ಕಾರು, ಟಿವಿಎಸ್‌ನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಪಾದಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಹೆದ್ದಾರಿಯಲ್ಲಿ ಸಮರ್ಪಕವಾಗಿ, ಅಗತ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸದಿರುವುದೇ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿಸಿದರು.

ಸ್ಥಳಕ್ಕೆ ಭೇಟಿ ನೀಡಿದ್ದ ಗುಬ್ಬಿ ಪೊಲೀಸರು, ವಾಹನ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.