ತುಮಕೂರು: ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಪಿಐ, ಸಿಪಿಎಂ, ಎಸ್‌ಯುಸಿಐ (ಕಮ್ಯುನಿಸ್ಟ್) ಒಟ್ಟಾಗಿ ಜೂನ್ 1ರಂದು ಆನ್‌ಲೈನ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿವೆ.

ಸಾರ್ವತ್ರಿಕ ಉಚಿತ ಲಸಿಕೆ, ಔಷಧಿ, ಚಿಕಿತ್ಸೆಗಾಗಿ ನೇರ ನಗದು ಪರಿಹಾರ, ಉಚಿತ ಪಡಿತರ, ರೈತ, ಕಾರ್ಮಿಕ ವಿರೋಧಿ ಕಾನೂನುಗಳ ರದ್ದತಿ, 200 ದಿನಗಳ ಉದ್ಯೋಗ ಖಾತ್ರಿಯನ್ನು ನಗರಗಳಿಗೂ ವಿಸ್ತರಣೆ, ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆಗೆ ಒತ್ತಾಯಿಸಲಾಗುತ್ತದೆ.

ಮನೆಗಳು ಹಾಗೂ ಮನೆಗಳ ಮುಂದೆ, ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಪ್ರತಿಭಟಿಸಬೇಕು ಎಂದು ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ.

ಕೋವಿಡ್ ಎರಡನೇ ಅಲೆ ಸಾವಿರಾರು ಜನರನ್ನು ಆಹುತಿ ತೆಗೆದುಕೊಂಡಿದೆ. ಕುಟುಂಬಕ್ಕೆ ಆಧಾರವಾಗಿ ಇದ್ದವರನ್ನು ಕಳೆದುಕೊಂಡಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರ ಸಕಾಲದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ ಜನರನ್ನು ಸಾವಿನ ದವಡೆಗೆ ನೂಕಿವೆ. ದೇಶಪ್ರೇಮ, ದೇಶಭಕ್ತಿ ಬಗ್ಗೆ ಭಾಷಣ ಮಾಡುವ ನಾಯಕರು, ಜನರ ಜೀವ ಉಳಿಸಲು ಅಗತ್ಯವಾದ ಆಸ್ಪತ್ರೆಗಳು, ಆಮ್ಲಜನಕ ಸಹಿತ ಹಾಸಿಗೆ ವ್ಯವಸ್ಥೆ ಮಾಡಲಿಲ್ಲ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ನೊಂದಿಲ್ಲ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.