ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಗೃಹಿಣಿಗೆ ₹5 ಲಕ್ಷ ಮೋಸ

Published 14 ಜುಲೈ 2024, 14:32 IST
Last Updated 14 ಜುಲೈ 2024, 14:32 IST
ಅಕ್ಷರ ಗಾತ್ರ

ತುಮಕೂರು: ಮನೆಯಲ್ಲಿ ಕುಳಿತುಕೊಂಡು ಆನ್‌ಲೈನ್‌ನಲ್ಲಿ ಪಾರ್ಟ್‌ ಟೈಮ್‌ ಕೆಲಸ ಮಾಡುತ್ತಾ ಹೆಚ್ಚಿನ ಹಣ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ಗುಬ್ಬಿ ತಾಲ್ಲೂಕು ಹಾಗಲವಾಡಿ ಹೋಬಳಿ ಹೊಸಕೆರೆಯ ವೀರಮ್ಮ ಎಂಬುವರು ₹5.18 ಲಕ್ಷ ಕಳೆದುಕೊಂಡಿದ್ದಾರೆ.

ವಾಟ್ಸ್‌ ಆ್ಯಪ್‌ ಮುಖಾಂತರ ಮೆಸೇಜ್‌ ಮಾಡಿದ ಸೈಬರ್‌ ವಂಚಕರು ಕೆಲಸದ ಆಸೆ ತೋರಿಸಿದ್ದಾರೆ. ‘ವಿಐಪಿ’ ವಾಟ್ಸ್‌ ಆ್ಯಪ್‌ ಗ್ರೂಪ್‌ಗೆ ಸೇರಿಸಿದ್ದಾರೆ. ಗ್ರೂಪ್‌ನಲ್ಲಿ ಒಂದು ಲಿಂಕ್‌ ಕಳುಹಿಸಿ ನೋಂದಣಿಯಾಗುವಂತೆ ತಿಳಿಸಿದ್ದಾರೆ. ನಂತರ ವೀರಮ್ಮ ಖಾತೆಗೆ ₹300 ಹಣ ವರ್ಗಾವಣೆ ಮಾಡಿದ್ದಾರೆ. ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ಹೇಳಿದ್ದಾರೆ. ಇದನ್ನು ನಂಬಿದ ವೀರಮ್ಮ ಜೂನ್‌ 18ರಿಂದ 26ರ ವರೆಗೆ ಹಂತ ಹಂತವಾಗಿ ವಿವಿಧ ಬ್ಯಾಂಕ್‌ ಖಾತೆ ಮತ್ತು ಯುಪಿಐ ಐ.ಡಿಗಳಿಗೆ ₹5,18,221 ಹಣ ವರ್ಗಾಯಿಸಿದ್ದಾರೆ.

ಯಾವುದೇ ಹಣ ವಾಪಸ್‌ ಬಂದಿಲ್ಲ. ವಂಚನೆಯಾಗಿರುವುದು ಅರಿವಿಗೆ ಬಂದ ನಂತರ ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಸೈಬರ್‌ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT