ಕೊರಟಗೆರೆ: ಕೊಬ್ಬರಿ ಬೆಂಬಲ ಬೆಲೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಕರೆ ನೀಡಿದ್ದ ಬಂದ್‌ಗೆ ಬುಧವಾರ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು. ಬೆಳಿಗ್ಗೆ ಸುಮಾರು ಎರಡು ಗಂಟೆ ಕಾಲ ಪಟ್ಟಣದ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು.

‘ಸರ್ಕಾರ ಕೂಡಲೆ ಕೊಬ್ಬರಿಗೆ ಬೆಂಬಲ ಬೆಲೆ ನಿಗದಿ ಪಡಿಸಬೇಕು. ಕೊರಟಗೆರೆ ತಾಲ್ಲೂಕಿನಲ್ಲಿರುವ ಸಾಗುವಳಿ ಸಮಸ್ಯೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರು ಗಮನ ಹರಿಸಿ, ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ರೈತರು ಒತ್ತಾಯಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಜಿಲ್ಲಾ ಘಟಕದ ಅಧ್ಯಕ್ಷ ಆನಂದ್ ಪಟೀಲ್, ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.