ಶಿರಾ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಯನ್ನು ವಿರೋಧಿಸಿ ತಾಲ್ಲೂಕಿನ ಕಿಲಾರದಹಳ್ಳಿ ತಾಂಡದಲ್ಲಿ ಲಂಬಾಣಿ ಸಮುದಾಯದವರು ಶನಿವಾರ ಪ್ರತಿಭಟನೆ ನಡೆಸಿ ವಿಧಾನಸಭೆ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿನಿಧಿಸುವ ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಕಿಲಾರದಹಳ್ಳಿ ತಾಂಡ ಸೇರಿದ್ದು, ಇಲ್ಲಿಂದ ಪ್ರತಿಭಟನೆಯ ಕಾವು ಪ್ರಾರಂಭವಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಒಳಮೀಸಲಾತಿ ಶಿಫಾರಸು ಮಾಡಿರುವುದನ್ನು ವಿರೋಧಿಸಿ ತಾಂಡದಲ್ಲಿ ಆಕ್ರೋಶ ವ್ಯಕ್ತ ಪಡಿಸಿದರು. ಸರ್ಕಾರದ ಈ ನೀತಿಯಿಂದ ಲಂಬಾಣಿ ಜನಾಂಗಕ್ಕೆ ಹೆಚ್ಚಿನ ಅನ್ಯಾಯವಾಗಲಿದೆ. ಮೀಸಲಾತಿ ನಮ್ಮ ಹಕ್ಕು, ಭಿಕ್ಷೆಯಲ್ಲ. ಆದ್ದರಿಂದ ಕೇಂದ್ರ ಸರ್ಕಾರಕ್ಕೆ ಮಾಡಿರುವ ಶಿಫಾರಸು ವಾಪಸ್ ಪಡೆಯುವಂತೆ ಒತ್ತಾಯಿಸಿದರು.

ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದು ಯಾವುದೇ ಪಕ್ಷದವರು ಸಹ ಗ್ರಾಮದಲ್ಲಿ ಪ್ರವೇಶ ಮಾಡದಂತೆ ಪ್ಲೆಕ್ಸ್ ಹಾಕಿದ್ದಾರೆ. ಪ್ರತಿಭಟನೆಯಲ್ಲಿ ಶಿರಾ ತಾಲ್ಲೂಕು ಲಂಬಾಣಿ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎನ್.ಶೇಷ ನಾಯಕ್, ಚಂದ್ರನಾಯಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.