ತುಮಕೂರು: ಮುಂದಿನ ದಿನಗಳಲ್ಲಿ ಒಂದು ಸಾವಿರ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪಿಎಸ್ಐ ನೇಮಕಾತಿ ಹಗರಣದ ವಿಚಾರ ನ್ಯಾಯಾಲಯದಲ್ಲಿ ಇದೆ. ಇದರಿಂದಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ಎಲ್ಲವೂ ಸರಿಯಾಗಿದ್ದರೆ ಈ ಹಿಂದೆಯೇ 545 ಪಿಎಸ್ಐ ನೇಮಕ ಆಗಬೇಕಿತ್ತು. ಈಗ ಮತ್ತೆ 400 ಪಿಎಸ್ಐ ನೇಮಕ ಮಾಡಿಕೊಳ್ಳಲು ಗೃಹ ಇಲಾಖೆ ಪ್ರಸ್ತಾಪ ಸಲ್ಲಿಸಿದೆ. ಎರಡೂ ಸೇರಿ ಸುಮಾರು ಒಂದು ಸಾವಿರ ಪಿಎಸ್ಐ ನೇಮಕ ಮಾಡಿಕೊಳ್ಳಬೇಕಿದೆ’ ಎಂದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ತನಿಖೆ ಪೂರ್ಣಗೊಂಡು, ಸಮಸ್ಯೆ ಬಗೆಹರಿಯಬೇಕಿದೆ. ನಂತರವಷ್ಟೇ ಹೊಸ ನೇಮಕಾತಿ ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.