ತುಮಕೂರು: ಮಧುಗಿರಿ ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನದ ಸಮೀಪ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಳವಡಿಸಿದ್ದ ಫ್ಲೆಕ್ಸ್ನಲ್ಲಿ ನಾಥೂರಾಮ್ ಗೋಡ್ಸೆ ಚಿತ್ರ ಹಾಕಿರುವುದು ಬೆಳಕಿಗೆ ಬಂದಿದ್ದು, ಈಗ ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘ಭಗತ್ಸಿಂಗ್ ಯೂಥ್ ಅಸೋಸಿಯೇಷನ್ನ ಡಿ.ಎಂ.ಬಡಾವಣೆ’ ಎಂಬ ಹೆಸರನ್ನು ಬಳಸಿಕೊಂಡು ಫ್ಲೆಕ್ಸ್ ಅಳವಡಿಸಲಾಗಿದೆ. ಆದರೆ ಈ ಹೆಸರಿನ ಸಂಘಟನೆ ಪಟ್ಟಣದಲ್ಲಿ ಇಲ್ಲ. ಸಂಘಟನೆ ಹೆಸರು ಬಳಸಿಕೊಂಡು ಕೆಲ ಕಿಡಿಗೇಡಿಗಳು ಈ ರೀತಿ ಮಾಡಿರಬಹುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಫ್ಲೆಕ್ಸ್ ಮೇಲ್ಭಾಗದಲ್ಲಿ ಕಿತ್ತೂರಿ ರಾಣಿ ಚೆನ್ನಮ್ಮ, ಭಗತ್ಸಿಂಗ್, ಸುಭಾಷ್ ಚಂದ್ರಬೋಸ್ ಜತೆಗೆ ನಾಥೂರಾಮ್ ಗೋಡ್ಸೆ ಚಿತ್ರ ಹಾಕಲಾಗಿದೆ. ಕೆಳಭಾಗದಲ್ಲಿ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಚಂದ್ರಶೇಖರ್ ಆಜಾದ್, ಲಾಲ್ಬಹದ್ದೂರ್ ಶಾಸ್ತ್ರಿ ಚಿತ್ರಗಳಿವೆ. ಗೋಡ್ಸೆ ಚಿತ್ರ ಬಳಸಿರುವುದು ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಗೋಡ್ಸೆ ಚಿತ್ರವಿರುವ ಫ್ಲೆಕ್ಸ್ ಹರಿದಾಡುತ್ತಿದ್ದಂತೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದಾಗ ಫ್ಲೆಕ್ಸ್ ತೆರವುಗೊಳಿಸಿರುವುದು ಕಂಡು ಬಂದಿದೆ.

ದೇಶದ ಮಹನೀಯರಿಗೆ ಯಾರು ಕೂಡ ಅಗೌರವದಿಂದ ನಡೆದುಕೊಳ್ಳಬಾರದು. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಸುರೇಶ್ ಆಚಾರ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.