ಕುಣಿಗಲ್: ತಾಲ್ಲೂಕಿನ ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾದ ಹೇಮಾವತಿ ಸಂಪರ್ಕ ಕಾಲುವೆ (ಲಿಂಕ್ ಕೆನಾಲ್) ನಿರ್ಮಾಣಕ್ಕೆ ಮಾರ್ಚ್ 1ರಂದು ಶಂಕುಸ್ಥಾಪನೆ ನೆರವೇರಲಿದೆ ಎಂದು ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ್ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದು, ಸಂಸದ ಡಿ.ಕೆ.ಸುರೇಶ್, ಶಾಸಕ ಡಾ.ರಂಗನಾಥ್ ಪಾಲ್ಗೊಳ್ಳಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ₹9.50 ಕೋಟಿ ವೆಚ್ಚದಲ್ಲಿ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿ, ₹35 ಕೋಟಿ ವೆಚ್ಚದ ಪಟ್ಟಣದ ಕುಡಿಯುವ ನೀರಿನ ಯೋಜನೆ, ₹35 ಕೋಟಿ ವೆಚ್ಚದಲ್ಲಿ ಒಳಚರಂಡಿ, ₹2 ಕೋಟಿ ವೆಚ್ಚದಲ್ಲಿ ಜಿಕೆಬಿಎಂಎಸ್ ಕ್ರೀಡಾಂಗಣ, ₹200 ಕೋಟಿ ವೆಚ್ಚದ ಲೋಕೋಪಯೋಗಿ, ಹೇಮಾವತಿ ನಾಲಾವಲಯದ ರಸ್ತೆ ಅಭಿವೃದ್ಧಿ, ಹುಲಿಯೂರುದುರ್ಗದ 440 ಕೆ.ವಿ ವಿದ್ಯುತ್ ಉಪಕೇಂದ್ರಕ್ಕೆ ಶಂಕುಸ್ಥಾಪನೆ ನಡೆಯಲಿದೆ ಎಂದು ತಿಳಿಸಿದರು.

ಪಟ್ಟಣದಲ್ಲಿ ನಿರ್ಮಾಣವಾಗಿರುವ ಮಿನಿ ವಿಧಾನಸೌಧ, ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಉದ್ಘಾಟನೆ ಜತೆಗೆ 25 ನೂತನ ಕೆಎಸ್ಆರ್‌ಟಿಸಿ ಬಸ್‌ಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಮಹಿಳಾ ಘಟಕದ ಅಧ್ಯಕ್ಷೆ ಸುಮತಿ, ಮುಖಂಡ ಮೋಹನ್ ಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.