ಕುಣಿಗಲ್: ಪಟ್ಟಣದ ಪುರಸಭಾ ಬಸ್ ನಿಲ್ದಾಣದಲ್ಲಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ತಿನಿಂದ ಪ್ರತಿಷ್ಠಾಪಿಸಿದ್ದ ಮಹಾಗಣಪತಿ ವಿಸರ್ಜನಾ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರ ಜತೆ ಶಾಸಕ ಡಾ.ರಂಗನಾಥ್, ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್, ರಾಜೇಶ್ ಗೌಡ, ಜೆಡಿಎಸ್ ಮುಖಂಡ ಬಿ.ಎನ್.ರವಿ ಮತ್ತು ಅರೆ ಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ ಪಾಲ್ಗೊಂಡಿದ್ದರು.

ವಿಸರ್ಜನಾ ಮಹೋತ್ಸವದಲ್ಲಿ ಬಂದ ಬಜರಂಗ ದಳದ ಕಾರ್ಯಕರ್ತರನ್ನು ಬಸ್ ನಿಲ್ದಾಣದ ಬಳಿ ಸ್ವಾಗತಿಸಿದ ಮುಸ್ಲಿಂ ಮುಖಂಡರು ಗಣಪತಿಗೆ ಪೂಜೆ ಸಲ್ಲಿಸಿ, ತಂಪು ಪಾನೀಯ ವಿತರಿಸಿದರು.

ಬಾಲಗಂಗಾಧರ್ ತಿಲಕ, ವೀರ ಸಾರ್ವರ್ಕರ್, ಶ್ರೀರಾಮ ಮತ್ತು ಭಜರಂಗಿಯ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಇದ್ದವು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಡಿವೈಎಸ್‌ಪಿ ಓಂಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಮೆರವಣಿಗೆ ನಂತರ ಕೊತ್ತಗೆರೆ ಕೆರೆಯಲ್ಲಿ ಗಣಪತಿಯನ್ನು ವಿಸರ್ಜಿಸಲಾಯಿತು.

ಭಜರಂಗದಳದ ಗಿರೀಶ್, ಪುರುಷೊತ್ತಮ್, ಜಗದೀಶ್ ಸತೀಶ್, ಮಹೇಶ್, ಎಡೆಯೂರು ಹರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.