ತುಮಕೂರು: ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳಲ್ಲಿ ಎಚ್‌ಐವಿ ತಪಾಸಣೆ ನಡೆಸಿದ್ದು, ಯಾವುದೇ ಪ್ರಕರಣಗಳು ದೃಢಪಟ್ಟಿಲ್ಲ. ಮುಂದಿನ ದಿನಗಳಲ್ಲಿ ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ಎಚ್‌ಐವಿ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 38 ಜನ ಲೈಂಗಿಕ ಕಾರ್ಯಕರ್ತೆಯರು, 39 ಲಿಂಗತ್ವ ಅಲ್ಪಸಂಖ್ಯಾತರು, 4 ಮಂದಿ ತೃತೀಯ ಲಿಂಗಿಗಳಲ್ಲಿ ಎಚ್‌ಐವಿ ಸೋಂಕು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಅಂಕಿ–ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 2,563 ಲೈಂಗಿಕ ಕಾರ್ಯಕರ್ತೆಯರು, 1,982 ಲಿಂಗತ್ವ ಅಲ್ಪ ಸಂಖ್ಯಾತರು, 124 ತೃತೀಯ ಲಿಂಗಿಗಳು ಎನ್‌ಜಿಒ ಅಡಿ ನೋಂದಣಿಯಾಗಿದ್ದಾರೆ. ಇದರಲ್ಲಿ ಶೇ 1.48ರಷ್ಟು ಲೈಂಗಿಕ ಕಾರ್ಯಕರ್ತೆಯರು, ಶೇ 1.96ರಷ್ಟು ಲಿಂಗತ್ವ ಅಲ್ಪ ಸಂಖ್ಯಾತರು ಮತ್ತು ಶೇ 3.23ರಷ್ಟು ತೃತೀಯ ಲಿಂಗಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಎಲ್ಲ ಸೋಂಕಿತರನ್ನು ಎಆರ್‌ಟಿ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಮಟ್ಟದಿಂದ ವಿವಿಧ ಐಇಸಿ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸೋಂಕು ಹರಡುವ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.