ತುಮಕೂರು: ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಮಂದಿ ಅಪರಾಧಿಗಳು ಎಂದು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶಿಸಿದೆ.

ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ಕೋರ್ಟ್ ಆದೇಶಿಸಿದೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸಲಿದೆ. ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಹೊನ್ನಮ್ಮ ಕೊಲೆ ನಡೆದಿತ್ತು. ಸುದೀರ್ಘ ಒಂದೂವರೆ ದಶಕಗಳ ಕಾಲ ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ಜ್ಯೋತಿ ತಿಳಿಸಿದರು.

ಗೋಪಾಲಪುರದ ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು. ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮುಂದುವರಿದಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಅಪರಾಧಿಗಳು: ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ– ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಅಪರಾಧಿಗಳು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್, ರಾಮಯ್ಯ, ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.