ಡಿ. 2ಕ್ಕೆ ಮುಖ್ಯಮಂತ್ರಿ ಭೇಟಿ ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಡಿ. 2ರಂದು ನಗರಕ್ಕೆ ಭೇಟಿ ನೀಡಲಿದ್ದು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಲಿದ್ದಾರೆ. ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಸಿದ್ಧತೆಗೆ ಸಂಬಂಧಿಸಿದಂತೆ ಸಚಿವ ಜಿ.ಪರಮೇಶ್ವರ ಅವರು ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಿದರು. ಕೃಷಿ ತೋಟಗಾರಿಕೆ ರೇಷ್ಮೆ ಮೀನುಗಾರಿಕೆ ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸವಲತ್ತು ವಿತರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಪ್ರತಿಯೊಂದು ಇಲಾಖೆಗೂ ಕೋಟ್ಯಂತರ ರೂಪಾಯಿ ಅನುದಾನ ಒದಗಿಸಿದ್ದರೂ ಸೌಲಭ್ಯಗಳು ನಿರೀಕ್ಷಿತ ಮಟ್ಟದಲ್ಲಿ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಇದರಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ಕರ್ತವ್ಯ ಲೋಪ ಎದ್ದುಕಾಣುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.