ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಟಿ.ಬಿ ಕ್ರಾಸ್ನ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನಿಂದ ಆದಿಚುಂಚನಗಿರಿ ಕೃಷಿ ವಿಜ್ಞಾನ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮ ಡಿಸೆಂಬರ್ 2ರಂದು ನಡೆಯಲಿದೆ ಎಂದು ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ 9:30ಕ್ಕೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಭಾಗವಹಿಸಲಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಶಾಸಕ ಎಂ.ಟಿ.ಕೃಷ್ಣಪ್ಪ, ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದ ಉಪಕುಲಪತಿ ಸುರೇಶ್ ಎಸ್.ವಿ, ಆದಿಚುಂಚನಗಿರಿಯ ವಿಶ್ವವಿದ್ಯಾನಿಲಯದ ಉಪಕುಲಪತಿ ಎಂ.ಎ.ಶೇಖರ್, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಕ ರಾಮೇಗೌಡ ಹಾಗೂ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.