ತುಮಕೂರು: ಹೊಸದಾಗಿ ಮಧುಗಿರಿ ತಾಲ್ಲೂಕಿನಲ್ಲಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಲ್ಲಿ ಶುಕ್ರವಾರ ಹೇಳಿದರು.

ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಆಡಳಿತ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಮಧುಗಿರಿ ತಾಲ್ಲೂಕಿನ ದೊಡ್ಡವೀರನಹಳ್ಳಿ, ಮದ್ಲೇರಹಳ್ಳಿ, ದಬ್ಬೇಘಟ್ಟ, ಕಂಬದಹಳ್ಳಿ ಗ್ರಾಮಗಳಲ್ಲಿ ಕೈಗಾರಿಕಾ ಘಟಕ ಸ್ಥಾಪನೆಯಾಗಲಿದೆ ಎಂದರು.

ತಾಲ್ಲೂಕಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಕ್ರಮ ವಹಿಸಿದ್ದು, ‘ತುಮಕೂರು ಇಂಡಸ್ಟ್ರಿಯಲ್ ಟೌನ್ಶಿಪ್’ ಸ್ಥಾಪನೆ ಮಾಡಲಾಗುತ್ತಿದೆ. ಯೋಜನೆ ಅನುಷ್ಠಾನಕ್ಕೆ ₹948 ಕೋಟಿ ವೆಚ್ಚ ಮಾಡುತ್ತಿದ್ದು, ಕೈಗಾರಿಕೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕನ್ನಡ ಭಾಷೆ, ನಾಡು, ನುಡಿ, ಸಾಹಿತಿಗಳು, ಹೋರಾಟಗಾರರನ್ನು ನೆನಪು ಮಾಡಿಕೊಳ್ಳುತ್ತಲೇ ಸರ್ಕಾರದ ಸಾಧನೆಗಳನ್ನು ಬಿಚ್ಚಿಟ್ಟರು. ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿರುವುದನ್ನು ಪ್ರಸ್ತಾಪಿಸಿದರು. ಕೃಷಿ, ರೇಷ್ಮೆ, ತೋಟಗಾರಿಕೆ, ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆ ಮೆಲುಕು ಹಾಕಿದರು. ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ನೆರವನ್ನು ನೆನಪಿಸಿಕೊಂಡರು. ಸ್ಮಾರ್ಟ್ ಸಿಟಿ, ಆರೋಗ್ಯ ಕ್ಷೇತ್ರದ ಪ್ರಗತಿ ಹಾಗೂ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ವಿಚಾರಗಳನ್ನು ಜನರ ಮುಂದಿಟ್ಟರು.

ಶಾಲಾ, ಕಾಲೇಜುಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಪೊಲೀಸ್, ಎನ್ಸಿಸಿ, ಎನ್ಎಸ್ಎಸ್ ಸೇರಿದಂತೆ ವಿವಿಧ ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ, ಎಸ್ಪಿ ಕೆ.ವಿ.ಅಶೋಕ್ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.