ಗುಬ್ಬಿ: ‘ಭಾರತ್ ಜೋಡೊ’ ಯಾತ್ರೆಯಲ್ಲಿ ಭಾಗವಹಿಸುವಂತೆ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ಕಾಂಗ್ರೆಸ್ ವರಿಷ್ಠರು ಆಹ್ವಾನ ನೀಡಿದ್ದು, ಅವರು ಯಾತ್ರೆಯಲ್ಲಿ ಭಾಗವಹಿಸುತ್ತಾರೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ಯಾತ್ರೆ ಸಾಗುವ ತಾಲ್ಲೂಕಿನ ಕಲ್ಲೂರು, ಪುರ ಹಾಗೂ ನಿಟ್ಟೂರಿನಲ್ಲಿ ಸ್ಥಳ ಪರಿಶೀಲಿಸಿದ ಅವರು, ಬಿಜೆಪಿ ವಿರೋಧಿಸುವ ಪ್ರಗತಿಪರ ಸಂಘಟನೆಗಳು, ಚಿಂತಕರನ್ನು ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಅಕ್ಟೋಬರ್ 9ರಿಂದ 13ರವರೆಗೆ ಯಾತ್ರೆ ಸಂಚರಿಸಲಿದ್ದು, ಅದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಮುಖಂಡರು ಹಾಗೂ ಕಾಂಗ್ರೆಸ್ ವರಿಷ್ಠರೊಡನೆ ಚರ್ಚಿಸಿದ ನಂತರ ಶಾಸಕ ಎಸ್.ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಶಾಸಕ ಎಸ್.ಅರ್ ಶ್ರೀನಿವಾಸ್ ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎನ್ನುತ್ತಿದ್ದರೂ, ಭಾನುವಾರ ಅವರ ಮಗ ದುಶ್ಯಂತ್ ಡಿ.ಕೆ. ಸುರೇಶ್ ಜೊತೆಯಲ್ಲಿ ಕಾಣಿಸಿಕೊಂಡಿದ್ದು ಅಚ್ಚರಿಗೆ ಕಾರಣವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.