ಪ್ರಜಾವಾಣಿ ವಾರ್ತೆ

ತುಮಕೂರು: ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಡಿ. 15ರಿಂದ ಎರಡು ದಿನಗಳ ಕಾಲ ನಗರದ ಗಾಜಿನ ಮನೆಯಲ್ಲಿ ನಡೆಯಬೇಕಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ.29 ಹಾಗೂ 30ಕ್ಕೆ ಮುಂದೂಡಲಾಗಿದೆ.

ಜಿಲ್ಲೆಯ ಜನಪ್ರತಿನಿಧಿಗಳು ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸಿದ್ದು, ಅಧಿಕಾರಿಗಳು ಸಹ ಅಧಿವೇಶನ ಮುಗಿಯುವವರೆಗೂ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಕಷ್ಟಕರವಾಗಲಿದೆ. ಹಾಗಾಗಿ ಸಮ್ಮೇಳನ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ತಿಳಿಸಿದ್ದಾರೆ.

ಜಿಲ್ಲೆಯವರೇ ಆದ ಲೇಖಕ ಎಚ್.ಎಸ್.ಶಿವಪ್ರಕಾಶ್ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಈಗಾಗಲೇ ಆಯ್ಕೆ ಮಾಡಲಾಗಿದೆ. ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದ ಪ್ರತಿನಿಧಿಗಳಾಗಿ ಭಾಗವಹಿಸುವ ಸರ್ಕಾರಿ ಇಲಾಖೆಗಳ ನೌಕರರು, ಶಿಕ್ಷಕರು, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು, ಇತರೆ ಸಿಬ್ಬಂದಿ ವರ್ಗಕ್ಕೆ ‘ಅನ್ಯಕಾರ್ಯ ನಿಮಿತ್ತ’ ರಜೆಯನ್ನು ಜಿಲ್ಲಾ ಆಡಳಿತ ಮಂಜೂರು ಮಾಡಿದೆ ಎಂದು ಹೇಳಿದ್ದಾರೆ.

ತುಮಕೂರು ದಕ್ಷಿಣ, ಉತ್ತರ ಶೈಕ್ಷಣಿಕ ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳ ಬಿಆರ್ಸಿ ಕಚೇರಿಗಳಲ್ಲಿ ನೋಂದಣಿ ಕಾರ್ಯ ಪ್ರಾರಂಭವಾಗಿದ್ದು ಸಮ್ಮೇಳನದಲ್ಲಿ ಭಾಗವಹಿಸುವವರು ಡಿ. 20ರ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.