ತುಮಕೂರು: ‘ಬೆಂಗಳೂರಿನ ನಮ್ಮ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಊಟ ಮಾಡಿದ್ದು ಬಿಟ್ಟರೆ ಬೇರೇನೂ ಚರ್ಚೆ ಆಗಿಲ್ಲ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ, ನಿಗಮ, ಮಂಡಳಿ ಅಧ್ಯಕ್ಷರ ನೇಮಕ ಸೇರಿದಂತೆ ಬೇರೆ ಯಾವ ರಾಜಕೀಯ ವಿಚಾರವನ್ನೂ ಚರ್ಚಿಸಿಲ್ಲ. ಸಿದ್ದರಾಮಯ್ಯ ಸೌಜನ್ಯದ ಭೇಟಿ ನೀಡಿದ್ದರು. ಇಬ್ಬರೂ ಊಟ ಮಾಡಿದೆವು. ನಂತರ ಅವರು ಮನೆಗೆ ಹೋದರು’ ಎಂದು ಹೇಳಿದರು.

ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಅವೆಲ್ಲಾ ಏನೂ ಇಲ್ಲ. ಸುಮ್ಮನೆ ಇಂತಹ ವಿಚಾರ ಮಾತನಾಡಬಾರದು’ ಎಂದು ಚುಟುಕಾಗಿ ಉತ್ತರಿಸಿದರು.

‘ತುಮಕೂರು ಲೋಕಸಭೆ ಕ್ಷೇತ್ರದಿಂದ ಸಚಿವ ಕೆ.ಎನ್.ರಾಜಣ್ಣ ಸ್ಪರ್ಧಿಸುವ ವಿಚಾರ ನನಗೆ ಗೊತ್ತಿಲ್ಲ. ಆದರೆ ರಾಜಣ್ಣ ಏಕೆ ಅಭ್ಯರ್ಥಿ ಆಗಬಾರದು’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.