ತುಮಕೂರು: ರಾಜ್ಯ ಒಕ್ಕಲಿಗರ ಸಂಘದಿಂದ ಆ. 11ರಂದು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಹಮ್ಮಿಕೊಳ್ಳಲಾಗಿದೆ.

‘ಕೆಂಪೇಗೌಡರು ಸರ್ವ ಜನಾಂಗದ ಹಿತ ಬಯಸಿದ್ದರು. ಜಾತ್ಯತೀತವಾಗಿ ಅವರ ಜಯಂತಿ ಆಚರಿಸಬೇಕು. ಎಲ್ಲ ಸಮುದಾಯದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು’ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ತಿಳಿಸಿದರು.

ನಗರದಲ್ಲಿ ಈಚೆಗೆ ನಡೆದ ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಒಕ್ಕಲಿಗ ಸಮುದಾಯದ ಒಗ್ಗಟ್ಟು ಮತ್ತು ಸಂಘಟನೆಗೆ ಜಯಂತಿ ಕಾರ್ಯಕ್ರಮ ಒಂದು ಸುವರ್ಣ ಅವಕಾಶ. ಕನಿಷ್ಠ 10 ಸಾವಿರ ಮಂದಿ ಸೇರಬೇಕು. ಒಕ್ಕಲಿಗ ಸಮುದಾಯದ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ವೈಯಕ್ತಿಕ ಪ್ರತಿಷ್ಠೆ ಮತ್ತು ಭಿನ್ನಾಭಿಪ್ರಾಯ ಮರೆತು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು’ ಎಂದು ತಿಳಿಸಿದರು.

ಕೇಂದ್ರ ಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತರಾಯಪ್ಪ, ‘ಜಯಂತಿಯ ದಿನ ಬಿಜಿಎಸ್ ವೃತ್ತದಿಂದ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ಕೆಂಪೇಗೌಡರ ಪುತ್ಥಳಿ ಹಾಗೂ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಜಿಲ್ಲೆಯ ಪ್ರಗತಿಪರ ರೈತರು, ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಲಾಗುವುದು’ ಎಂದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಚಿವ ಜಿ.ಪರಮೇಶ್ವರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವ ಕೆ.ಎನ್.ರಾಜಣ್ಣ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮುಖಂಡರಾದ ಕಲ್ಲಹಳ್ಳಿ ದೇವರಾಜು, ಕೃಷ್ಣೇಗೌಡ, ಶ್ರೀನಿವಾಸ್, ಧರಣೇಂಧ್ರಕುಮಾರ್, ಗಿರೀಶ್ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.