ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿಯ ರಾಗಿಮುದ್ದೇನಹಳ್ಳಿ ಗ್ರಾಮದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ರಿಪೇರಿ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ಮ್ಯಾನ್ ದುರ್ಗಪ್ರಸನ್ನ (29) ಮೃತಪಟ್ಟಿದ್ದಾರೆ.

ಹುಚ್ಚಯ್ಯನಪಾಳ್ಯದ ಪ್ರಸನ್ನ ಹೆಬ್ಬೂರಿನ ಬೆಸ್ಕಾಂ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಾರ್ಯ ನಿಮಿತ್ತ ರಾಗಿಮುದ್ದೇನಹಳ್ಳಿಗೆ ಭೇಟಿ ನೀಡಿದಾಗ ಅವಘಡ ಸಂಭವಿಸಿದೆ. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದರು.

‘ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದುರಸ್ತಿ ಕಾರ್ಯ ಮಾಡುತ್ತಿದ್ದರು. ಏಕಾಏಕಿ ವಿದ್ಯುತ್ ಪ್ರವಹಿಸಿದ್ದು ಹೇಗೆ? ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಂದು ಸಾವಾಗಿದೆ’ ಎಂದು ರಾಗಿಮುದ್ದೇನಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.