ತುಮಕೂರು: ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 11ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಕೆ.ಬಿ.ಗೀತಾ ಹೇಳಿದರು.

ರಾಜಿ, ಸಂಧಾನದ ಮೂಲಕ ಪ್ರಕರಣಗಳನ್ನು ಸುಲಭವಾಗಿ, ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೆ ಇತ್ಯರ್ಥ ಪಡಿಸಿಕೊಳ್ಳಬಹುದು. ಇದರಿಂದ ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲಿದ್ದು, ನ್ಯಾಯಾಧೀಶರು ಇತರೆ ಪ್ರಕರಣಗಳಿಗೆ ಹೆಚ್ಚು ಒತ್ತು ನೀಡಲು ಸಾಧ್ಯವಾಗಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

ಲೋಕ್ ಅದಾಲತ್‍ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಮರು ಪಾವತಿಸಲಾಗುವುದು. ಕಡಿಮೆ ಖರ್ಚಿನಲ್ಲಿ ಶೀಘ್ರ ನ್ಯಾಯ ಪಡೆದುಕೊಳ್ಳಬಹುದು ಎಂದರು.

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ನೂರುನ್ನೀಸಾ, ‘ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳಿಗೆ ಪೊಲೀಸರು ಇ–ಚಲನ್ ಮೂಲಕ ಹಾಕಿರುವ ದಂಡ ಪಾವತಿಗೆ ಶೇ 50ರಷ್ಟು ರಿಯಾಯಿತಿ ನೀಡಲಾಗಿದೆ. ಸೆ. 9ರ ಒಳಗೆ ದಂಡ ಪಾವತಿಸಿ ಈ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ’ ಎಂದು ತಿಳಿಸಿದರು.

ಜುಲ್ಯೆ 9ರಂದು ನಡೆದ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 92,178 ಪ್ರಕರಣಗಳಲ್ಲಿ 11,790 ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 1,59,265 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು.

ಮಾಹಿತಿಗಾಗಿ dlsatumkur1@gmail.com, ಸದಸ್ಯ ಕಾರ್ಯದರ್ಶಿ ಕಚೇರಿ ದೂರವಾಣಿ 0816–2255133, ಮೊ 9141193959 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.